ಮೈಸೂರಿನಲ್ಲೂ ಭುಗಿಲೆದ್ದ ಕಬ್ಬು ಕಿಚ್ಚು: ಡಿಸಿ ಕಚೇರಿ ರಸ್ತೆಯಲ್ಲೇ ಅಡುಗೆ ತಯಾರಿಸಿ ಊಟ

Edited By:

Updated on: Nov 03, 2026 | 3:13 PM

ಮೈಸೂರಿನಲ್ಲೂ ಸಹ ಕಬ್ಬಿನ ಕಿಚ್ಚು ಜೋರಾಗಿದ್ದು, ಮೈಸೂರು ಸಿದ್ದಾರ್ಥ್​​ ನಗರದಲ್ಲಿರುವ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆದಿದೆ. ಕೊನೆಗೆ ರೈತರು ಡಿಸಿ ಕಚೇರಿ ರಸ್ತೆಯಲ್ಲೇ ಅಡುಗೆ ತಯಾರಿಸಿ ಊಟ ಮಾಡಿ ವಿನೂತನ ಧರಣಿ ನಡೆಸಿದ್ದಾರೆ.

ಮೈಸೂರು, ನವೆಂಬರ್ 03): ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದೀಗ ಅಂತಿಮವಾಗಿ ಬೆಳಗಾವಿಯ ಹಿಂಡಲಗಾ ಜೈಲು ಬಾರೋ ಚಳವಳಿ ಆರಂಭಿಸಿದ್ದಾರೆ. ಕೈಗೆ ಸರಪಳಿ ಕಟ್ಟಿಕೊಂಡು ಹಿಂಡಲಗಾ ಜೈಲಿನತ್ತ ಪಾದಯಾತ್ರೆ ನಡೆಸಿದ್ದಾರೆ. ಇನ್ನೊಂದೆಡೆ ಮೈಸೂರಿನಲ್ಲೂ ಸಹ ಕಬ್ಬಿನ ಕಿಚ್ಚು ಜೋರಾಗಿದ್ದು, ಮೈಸೂರು ಸಿದ್ದಾರ್ಥ್​​ ನಗರದಲ್ಲಿರುವ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆದಿದೆ. ಕೊನೆಗೆ ರೈತರು ಡಿಸಿ ಕಚೇರಿ ರಸ್ತೆಯಲ್ಲೇ ಅಡುಗೆ ತಯಾರಿಸಿ ಊಟ ಮಾಡಿ ವಿನೂತನ ಧರಣಿ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More