AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕ್ ಖರ್ಗೆ ಊಟ ಮಾಡಿ ಮಲಗಿದ್ದಾರಾ, ರೈತರ ವಿಚಾರ ಬಂದಾಗ ‘ಅದ್ರಾಗ’ ಧಮ್ಮಿಲ್ವಾ: ಮರುಳಾರಾಧ್ಯ ಸ್ವಾಮೀಜಿ ಆಕ್ಷೇಪಾರ್ಹ ಹೇಳಿಕೆ

ಪ್ರಿಯಾಂಕ್ ಖರ್ಗೆ ಊಟ ಮಾಡಿ ಮಲಗಿದ್ದಾರಾ, ರೈತರ ವಿಚಾರ ಬಂದಾಗ ‘ಅದ್ರಾಗ’ ಧಮ್ಮಿಲ್ವಾ: ಮರುಳಾರಾಧ್ಯ ಸ್ವಾಮೀಜಿ ಆಕ್ಷೇಪಾರ್ಹ ಹೇಳಿಕೆ

ದತ್ತಾತ್ರೇಯ ಪಾಟೀಲ್​
| Edited By: |

Updated on: Nov 07, 2026 | 2:31 PM

Share

ಕಲಬುರಗಿ ಜಿಲ್ಲೆಯ ಚೌಡಾಪುರದಲ್ಲಿ ನಡೆದ ಕಬ್ಬು ಬೆಳೆಗಾರರ ಪ್ರತಿಭಟನೆಯಲ್ಲಿ ಶ್ರೀ ಮರುಳಾರಾಧ್ಯ ಸ್ವಾಮೀಜಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆಕ್ಷೇಪಾರ್ಹ ಪದ ಬಳಸಿ ವಾಗ್ದಾಳಿ ನಡೆಸಿದ್ದು, ಜಿಲ್ಲಾ ಉಸ್ತುವಾರಿ ಸಚಿವರ ಪಾತ್ರವನ್ನು ಪ್ರಶ್ನಿಸಿದ್ದಾರೆ. ಸದ್ಯ ಸ್ವಾಮೀಜಿ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದ್ದು, ಆಕ್ಷೇಪ ವ್ಯಕ್ತವಾಗುತ್ತಿದೆ.

ಕಲಬುರಗಿ, ನವೆಂಬರ್ 7: ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಬೆಂಬಲ ನೀಡುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯ ವೇಳೆ ಶ್ರೀ ಮರುಳಾರಾಧ್ಯ ಸ್ವಾಮೀಜಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಾಪುರ ಗ್ರಾಮದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಾಶ್ಯಾಳ ಗ್ರಾಮದ ಮಠದ ಮರುಳಾರಾಧ್ಯ ಸ್ವಾಮೀಜಿ, ರೈತರ ಸಮಸ್ಯೆ ಪರಿಹಾರದ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಪಾತ್ರವನ್ನು ಪ್ರಶ್ನಿಸಿ ವಾಗ್ದಾಳಿ ನಡೆಸಿದರು. ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವ ವಿಚಾರ ಬಂದಾಗ ಎಲ್ಲರೂ ಜಿಲ್ಲಾಧಿಕಾರಿ ಮತ್ತು ಶಾಸಕರ ಹೆಸರನ್ನು ಹೇಳುತ್ತಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರೇನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ ಸ್ವಾಮೀಜಿ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆಕ್ಷೇಪಾರ್ಹ ಪದ ಬಳಸಿ ವಾಗ್ದಾಳಿ ನಡೆಸಿದರು.

‘‘ಬೇರೆ ವಿಚಾರಗಳೇನೇ ಇದ್ದರೂ ಪ್ರತಿಕ್ರಿಯೆ ನೀಡುತ್ತಾರೆ. ಹೇಳಿಕೆ ಕೊಡುತ್ತಾರೆ. ಆದರೆ, ರೈತರ ವಿಚಾರ ಬಂದಾಗ ಉಸ್ತುವಾರಿ ಸಚಿವರು ಊಟ ಮಾಡಿ ಮಲಗಿದ್ದಾರಾ? ರೈತರ ಸಮಸ್ಯೆ ಬಗೆಹರಿಸಲು ಅವರಿಗೆ ಕುಂ..ಆಗ ಧಮ್ ಇಲ್ಲವೇ’’ ಎಂದು ಮರುಳಾರಾಧ್ಯ ಸ್ವಾಮೀಜಿ ಪ್ರಶ್ನಿಸಿದರು. ಸದ್ಯ ಈ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದತ್ತಾತ್ರೇಯ ಪಾಟೀಲ್​
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More