ಕಬ್ಬು ಬೆಳಗಾರರ ಹೋರಾಟ: ಪ್ರಧಾನಿಗೆ ಸಿಎಂ ಲೆಟರ್; ಸಿದ್ದರಾಮಯ್ಯಗೆ ಜೋಶಿ ಟಕ್ಕರ್
ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿಗೆ ಪತ್ರ ಬರೆದು ಭೇಟಿಗೆ ಅವಕಾಶ ಕೋರಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ನಡೆ ಮೂರ್ಖತನದ ಪರಮಾವಧಿ ಎಂದು ಟೀಕಿಸಿದ್ದಾರೆ. ರೈತರ ಸಮಸ್ಯೆ ಪರಿಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಹೀಗಾಗಿ ಕೇಂದ್ರದ ಕಡೆ ಬೊಟ್ಟು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಬೆಂಗಳೂರು, ನವೆಂಬರ್ 07: ಕಬ್ಬು ಬೆಳೆಗಾರರ ಹೋರಾಟದ ಕುರಿತು ರಾಜ್ಯದಲ್ಲಿ ರಾಜಕೀಯ ವಾಕ್ಸಮರ ತೀವ್ರಗೊಂಡಿದೆ. ರೈತರ ಪ್ರತಿಭಟನೆ ವಿಚಾರವಾಗಿ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದು, ತುರ್ತು ಭೇಟಿಗೆ ಅವಕಾಶ ಕೋರಿದ್ದಾರೆ. ಆದರೆ, ಮುಖ್ಯಮಂತ್ರಿಗಳ ಈ ನಡೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರವಾಗಿ ಖಂಡಿಸಿದ್ದಾರೆ. ಸಿದ್ದರಾಮಯ್ಯ ಅವರ ಪತ್ರವನ್ನು ಮೂರ್ಖತನದ ಪರಮಾವಧಿ ಮತ್ತು ಶುದ್ಧ ಅಯೋಗ್ಯತನ ಎಂದು ಕೇಂದ್ರ ಸಚಿವರು ಆರೋಪಿಸಿದ್ದು, ರೈತರ ಸಮಸ್ಯೆ ಪರಿಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಹೀಗಾಗಿ ಕೇಂದ್ರದ ಕಡೆ ಬೊಟ್ಟು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

