AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ, ಬಾಗಲಕೋಟೆಯಲ್ಲಿ ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ: ಹೆದ್ದಾರಿಯಲ್ಲೇ ಅಡುಗೆ, ಅಲ್ಲೇ ಊಟ-ನಿದ್ದೆ!

ಬೆಳಗಾವಿ, ಬಾಗಲಕೋಟೆಯಲ್ಲಿ ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ: ಹೆದ್ದಾರಿಯಲ್ಲೇ ಅಡುಗೆ, ಅಲ್ಲೇ ಊಟ-ನಿದ್ದೆ!

ಸಹದೇವ್​ ಮಾನೆ
| Edited By: |

Updated on: Oct 14, 2026 | 7:44 AM

Share

ಕಬ್ಬು ಬೆಳೆಗೆ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ರಾಷ್ಟ್ರೀಯ ಹೆದ್ದಾರಿ ತಡೆದು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹತ್ತರಗಿ, ಹಿರೆಬಾಗೇವಾಡಿ, ಕೊಗ್ಗನೊಳ್ಳಿ, ಸೊರಗಾವಿ ಟೋಲ್ ಪ್ಲಾಜಾಗಳ ಬಳಿ ರೈತರು ಹೆದ್ದಾರಿಯಲ್ಲೇ ಅಡುಗೆ ಮಾಡಿ ಊಟ ಸೇವಿಸಿ ಮಲಗುವ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.

ಬೆಳಗಾವಿ, ಅಕ್ಟೋಬರ್ 14: ಕಬ್ಬು ಬೆಳೆಗೆ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಪ್ಲಾಜಾ ಸೇರಿದಂತೆ ಹಿರೆಬಾಗೇವಾಡಿ ಮತ್ತು ಕೊಗ್ಗನೊಳ್ಳಿ ಚೆಕ್ ಪೋಸ್ಟ್‌ಗಳಲ್ಲಿ ರೈತರು ರಾಷ್ಟ್ರೀಯ ಹೆದ್ದಾರಿ-48 ತಡೆದು ಪ್ರತಿಭಟನೆ ನಡೆಸಿದ್ದಾರೆ. ರೈತರು ಹೆದ್ದಾರಿಯಲ್ಲೇ ಅಡುಗೆ ಮಾಡಿ, ಊಟ ಸೇವಿಸಿ, ಹಾಸಿಗೆ ಹಾಸಿ ಮಲಗುವ ಮೂಲಕ ತಮ್ಮ ಹೋರಾಟವನ್ನು ಮುಂದುವರೆಸಿದ್ದಾರೆ. ಈ ಅಹೋರಾತ್ರಿ ಧರಣಿಯು 13 ಗಂಟೆಗಳಿಗೂ ಹೆಚ್ಚು ಕಾಲದಿಂದ ನಡೆಯುತ್ತಿದ್ದು, ಇದರಿಂದ ಹೆದ್ದಾರಿಯುದ್ದಕ್ಕೂ ಕಿಲೋಮೀಟರ್‌ಗಟ್ಟಲೆ ಸರಕು ವಾಹನಗಳು ನಿಂತುಬಿಟ್ಟಿವೆ. ರೈತ ಮುಖಂಡ ಚೂನಪ್ಪ ಪೂಜಾರಿ ಅವರ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಸೊರಗಾವಿ ಗ್ರಾಮದಲ್ಲೂ ಇದೇ ರೀತಿಯ ಪ್ರತಿಭಟನೆ ನಡೆಯುತ್ತಿದ್ದು, ರೈತರು ದರ ನಿಗದಿ ಆಗುವವರೆಗೂ ಹೋರಾಟವನ್ನು ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರಕ್ಕೆ ಬೇಡಿಕೆ ಈಡೇರಿಸಲು ಗಡುವು ನೀಡಿದ್ದು, ಇಲ್ಲವಾದರೆ ಉಗ್ರ ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More