ಬೆಳಗಾವಿ, ಬಾಗಲಕೋಟೆಯಲ್ಲಿ ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ
ಕಬ್ಬು ಬೆಳೆಗೆ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ರಾಷ್ಟ್ರೀಯ ಹೆದ್ದಾರಿ ತಡೆದು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹತ್ತರಗಿ, ಹಿರೆಬಾಗೇವಾಡಿ, ಕೊಗ್ಗನೊಳ್ಳಿ, ಸೊರಗಾವಿ ಟೋಲ್ ಪ್ಲಾಜಾಗಳ ಬಳಿ ರೈತರು ಹೆದ್ದಾರಿಯಲ್ಲೇ ಅಡುಗೆ ಮಾಡಿ ಊಟ ಸೇವಿಸಿ ಮಲಗುವ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.
ಬೆಳಗಾವಿ, ಅಕ್ಟೋಬರ್ 14: ಕಬ್ಬು ಬೆಳೆಗೆ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಪ್ಲಾಜಾ ಸೇರಿದಂತೆ ಹಿರೆಬಾಗೇವಾಡಿ ಮತ್ತು ಕೊಗ್ಗನೊಳ್ಳಿ ಚೆಕ್ ಪೋಸ್ಟ್‌ಗಳಲ್ಲಿ ರೈತರು ರಾಷ್ಟ್ರೀಯ ಹೆದ್ದಾರಿ-48 ತಡೆದು ಪ್ರತಿಭಟನೆ ನಡೆಸಿದ್ದಾರೆ. ಈ ಅಹೋರಾತ್ರಿ ಧರಣಿಯು 13 ಗಂಟೆಗಳಿಗೂ ಹೆಚ್ಚು ಕಾಲದಿಂದ ನಡೆಯುತ್ತಿದ್ದು, ಇದರಿಂದ ಹೆದ್ದಾರಿಯುದ್ದಕ್ಕೂ ಕಿಲೋಮೀಟರ್‌ಗಟ್ಟಲೆ ಸರಕು ವಾಹನಗಳು ನಿಂತುಬಿಟ್ಟಿವೆ. ರೈತ ಮುಖಂಡ ಚೂನಪ್ಪ ಪೂಜಾರಿ ಅವರ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಸೊರಗಾವಿ ಗ್ರಾಮದಲ್ಲೂ ಇದೇ ರೀತಿಯ ಪ್ರತಿಭಟನೆ ನಡೆಯುತ್ತಿದ್ದು, ರೈತರು ದರ ನಿಗದಿ ಆಗುವವರೆಗೂ ಹೋರಾಟವನ್ನು ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರಕ್ಕೆ ಬೇಡಿಕೆ ಈಡೇರಿಸಲು ಗಡುವು ನೀಡಿದ್ದು, ಇಲ್ಲವಾದರೆ ಉಗ್ರ ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
