ಕಬ್ಬು ಬೆಳಗಾರರ ಪ್ರತಿಭಟನೆ: 8 ದಿನ ಬಳಿಕ ಧರಣಿ ಸ್ಥಳಕ್ಕೆ ಬಂದ ಸಚಿವರ ವಿರುದ್ಧ ರೊಚ್ಚಿಗೆದ್ದ ರೈತರು
ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರ ಅಹೋರಾತ್ರಿ ಹೋರಾಟ ಮುಂದುವರೆದಿದೆ. ಪ್ರತಿ ಟನ್ ಕಬ್ಬಿಗೆ 3,500 ರೂ. ದರ ಘೋಷಣೆಗೆ ಒತ್ತಾಯಿಸಿ ಕಬ್ಬು ಬೆಳೆಗಾರುರು ಕಳೆದ 8 ದಿನಗಳಿಂದ ಬೆಳಗಾವಿಯ ಗುರ್ಲಾಪುರ ಕ್ರಾಸ್ನಲ್ಲಿ ಧರಣಿ ನಡೆಸಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್ ಅವರು ಸ್ಥಳಕ್ಕೆ ಭೇಟಿ ನೀಡಿದರು. 8ನೇ ದಿನಕ್ಕೆ ಬಂದಿದ್ದಾರೆಂದು ರೊಚ್ಚಿಗೆದ್ದ ರೈತರು ಸಚಿವರು ವಿರುದ್ಧ ಘೋಷಣೆ ಕೂಗಿದರು. ಅಲ್ಲದೇ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಸಚಿವರ ಕಾರಿನಲ್ಲಿ ಮೇಲೆ ಚಪ್ಪಲಿ ಎಸೆದು ಆಕ್ರೋಶ ಹೊರಹಾಕಿದ್ದಾರೆ.
ಬೆಳಗಾವಿ, (ನವೆಂಬರ್ 06): ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರ ಅಹೋರಾತ್ರಿ ಹೋರಾಟ ಮುಂದುವರೆದಿದೆ. ಪ್ರತಿ ಟನ್ ಕಬ್ಬಿಗೆ 3,500 ರೂ. ದರ ಘೋಷಣೆಗೆ ಒತ್ತಾಯಿಸಿ ಕಬ್ಬು ಬೆಳೆಗಾರುರು ಕಳೆದ 8 ದಿನಗಳಿಂದ ಬೆಳಗಾವಿಯ ಗುರ್ಲಾಪುರ ಕ್ರಾಸ್ನಲ್ಲಿ ಧರಣಿ ನಡೆಸಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್ ಅವರು ಸ್ಥಳಕ್ಕೆ ಭೇಟಿ ನೀಡಿದರು. 8ನೇ ದಿನಕ್ಕೆ ಬಂದಿದ್ದಾರೆಂದು ರೊಚ್ಚಿಗೆದ್ದ ರೈತರು ಸಚಿವರು ವಿರುದ್ಧ ಘೋಷಣೆ ಕೂಗಿದರು. ಅಲ್ಲದೇ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಸಚಿವರ ಕಾರಿನಲ್ಲಿ ಮೇಲೆ ಚಪ್ಪಲಿ ಎಸೆದು ಆಕ್ರೋಶ ಹೊರಹಾಕಿದ್ದಾರೆ.

