ಕಬ್ಬು ಬೆಳಗಾರರ ಪ್ರತಿಭಟನೆ: 8 ದಿನ ಬಳಿಕ ಧರಣಿ ಸ್ಥಳಕ್ಕೆ ಬಂದ ಸಚಿವರ ವಿರುದ್ಧ ರೊಚ್ಚಿಗೆದ್ದ ರೈತರು

Updated on: Nov 06, 2025 | 7:58 PM

ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರ ಅಹೋರಾತ್ರಿ ಹೋರಾಟ ಮುಂದುವರೆದಿದೆ. ಪ್ರತಿ ಟನ್ ಕಬ್ಬಿಗೆ 3,500 ರೂ. ದರ ಘೋಷಣೆಗೆ ಒತ್ತಾಯಿಸಿ ಕಬ್ಬು ಬೆಳೆಗಾರುರು ಕಳೆದ 8 ದಿನಗಳಿಂದ ಬೆಳಗಾವಿಯ ಗುರ್ಲಾಪುರ ಕ್ರಾ​ಸ್​​ನಲ್ಲಿ ಧರಣಿ ನಡೆಸಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್ ಅವರು ಸ್ಥಳಕ್ಕೆ ಭೇಟಿ ನೀಡಿದರು. 8ನೇ ದಿನಕ್ಕೆ ಬಂದಿದ್ದಾರೆಂದು ರೊಚ್ಚಿಗೆದ್ದ ರೈತರು ಸಚಿವರು ವಿರುದ್ಧ ಘೋಷಣೆ ಕೂಗಿದರು. ಅಲ್ಲದೇ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಸಚಿವರ ಕಾರಿನಲ್ಲಿ ಮೇಲೆ ಚಪ್ಪಲಿ ಎಸೆದು ಆಕ್ರೋಶ ಹೊರಹಾಕಿದ್ದಾರೆ.

ಬೆಳಗಾವಿ, (ನವೆಂಬರ್ 06): ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರ ಅಹೋರಾತ್ರಿ ಹೋರಾಟ ಮುಂದುವರೆದಿದೆ. ಪ್ರತಿ ಟನ್ ಕಬ್ಬಿಗೆ 3,500 ರೂ. ದರ ಘೋಷಣೆಗೆ ಒತ್ತಾಯಿಸಿ ಕಬ್ಬು ಬೆಳೆಗಾರುರು ಕಳೆದ 8 ದಿನಗಳಿಂದ ಬೆಳಗಾವಿಯ ಗುರ್ಲಾಪುರ ಕ್ರಾ​ಸ್​​ನಲ್ಲಿ ಧರಣಿ ನಡೆಸಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್ ಅವರು ಸ್ಥಳಕ್ಕೆ ಭೇಟಿ ನೀಡಿದರು. 8ನೇ ದಿನಕ್ಕೆ ಬಂದಿದ್ದಾರೆಂದು ರೊಚ್ಚಿಗೆದ್ದ ರೈತರು ಸಚಿವರು ವಿರುದ್ಧ ಘೋಷಣೆ ಕೂಗಿದರು. ಅಲ್ಲದೇ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಸಚಿವರ ಕಾರಿನಲ್ಲಿ ಮೇಲೆ ಚಪ್ಪಲಿ ಎಸೆದು ಆಕ್ರೋಶ ಹೊರಹಾಕಿದ್ದಾರೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More