AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಹೆಚ್‌.ಕೆ.ಪಾಟೀಲ್ ಸಂಧಾನ ಸಭೆ ವಿಫಲ: ಸರ್ಕಾರಕ್ಕೆ ಡೆಡ್​​ಲೈನ್​ ಕೊಟ್ಟ ಕಬ್ಬು ಬೆಳೆಗಾರರು

ಸಚಿವ ಹೆಚ್‌.ಕೆ.ಪಾಟೀಲ್ ಸಂಧಾನ ಸಭೆ ವಿಫಲ: ಸರ್ಕಾರಕ್ಕೆ ಡೆಡ್​​ಲೈನ್​ ಕೊಟ್ಟ ಕಬ್ಬು ಬೆಳೆಗಾರರು

ಸಹದೇವ್​ ಮಾನೆ
| Edited By: |

Updated on: Nov 05, 2025 | 8:47 PM

Share

ಕಬ್ಬಿಗೆ ಬೆಂಬಲ ಬೆಲೆ ಹೆಚ್ಚಿಸಬೇಕೆಂದು ಆಗ್ರಹಿಸಿ ರೈತರು 7 ದಿನಗಳಿಂದ ನಡೆಸುತ್ತಿರುವ ಹೋರಾಟಕ್ಕೆ ವಿಪಕ್ಷಗಳೂ ಕೈ ಜೋಡಿಸಿವೆ. ಹೀಗಾಗಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಕಾನೂನು ಸಚಿವ ಎಚ್​​ಕೆ ಪಾಟೀಲ್ ಅವರು ಸ್ಥಳಕ್ಕೆ ಆಗಮಿಸಿ ರೈತರ ಆಹವಾಲು ಸಭೆ ನಡೆಸಿದರು. ಆದ್ರೆ, ಸಂಧಾನ ಸಭೆ ವಿಫಲವಾಗಿದೆ. ಸಂಧಾನ ಸಭೆ ವಿಫಲವಾಗುತ್ತಿದ್ದಂತೆಯೇ ರೈತರು ಸಚಿವರ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದರು. ಕಾರಿಗೆ ಗುದ್ದಿ ಬೇಕೇ ಬೇಕು ನ್ಯಾಯ ಬೇಕೆಂದು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತುದ್ದ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಇದರಿಂದ ಪೊಲೀಸರು ಹಾಗೂ ಕಬ್ಬು ಬೆಳೆಗಾರರ ನಡುವೆ ತಳ್ಳಾಟ ನೂಕಾಟ ಉಂಟಾಯ್ತು.

ಬೆಳಗಾವಿ, (ನವೆಂಬರ್ 05): ಕಬ್ಬಿಗೆ ಬೆಂಬಲ ಬೆಲೆ ಹೆಚ್ಚಿಸಬೇಕೆಂದು ಆಗ್ರಹಿಸಿ ರೈತರು 7 ದಿನಗಳಿಂದ ನಡೆಸುತ್ತಿರುವ ಹೋರಾಟಕ್ಕೆ ವಿಪಕ್ಷಗಳೂ ಕೈ ಜೋಡಿಸಿವೆ. ಹೀಗಾಗಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಕಾನೂನು ಸಚಿವ ಎಚ್​​ಕೆ ಪಾಟೀಲ್ ಅವರು ಸ್ಥಳಕ್ಕೆ ಆಗಮಿಸಿ ರೈತರ ಆಹವಾಲು ಸಭೆ ನಡೆಸಿದರು. ಆದ್ರೆ, ಸಂಧಾನ ಸಭೆ ವಿಫಲವಾಗಿದೆ. ಸಂಧಾನ ಸಭೆ ವಿಫಲವಾಗುತ್ತಿದ್ದಂತೆಯೇ ರೈತರು ಸಚಿವರ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದರು. ಕಾರಿಗೆ ಗುದ್ದಿ ಬೇಕೇ ಬೇಕು ನ್ಯಾಯ ಬೇಕೆಂದು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತುದ್ದ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಇದರಿಂದ ಪೊಲೀಸರು ಹಾಗೂ ಕಬ್ಬು ಬೆಳೆಗಾರರ ನಡುವೆ ತಳ್ಳಾಟ ನೂಕಾಟ ಉಂಟಾಯ್ತು.

ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿರುವ ರೈತ ಮುಖಂಡ ಶಶಿಕಾಂತ ಪಡಸಲಗಿ, ಸಿಎಂ ಭೇಟಿಗೆ ಬರುವಂತೆ ಸಚಿವರು ನೀಡಿದ ಆಹ್ವಾನವನ್ನು ಒಪ್ಪಲಿಲ್ಲ.ನಾಳೆ (ನವೆಂಬರ್ 06) ಸಂಜೆ 7 ಗಂಟೆಯವರೆಗೆ ಸರ್ಕಾರಕ್ಕೆ ಡೆಡ್​ಲೈನ್ ನೀಡಿದ್ದೇವೆ. ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಭೆ ನಡೆಸಿ ನಿರ್ಧಾರ ಮಾಡಲಿ. ಡಿಸಿ ಮೂಲಕ ಶುಭ ಸಂದೇಶ ನೀಡಿದರೆ ಹೋರಾಟ ಹಿಂಪಡೆಯುತ್ತೇವೆ. ಒಂದು ವೇಳೆ ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ದರೆ ನವೆಂಬರ್ 7ರಿಂದ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದರು.

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More