ಸಚಿವ ಹೆಚ್.ಕೆ.ಪಾಟೀಲ್ ಸಂಧಾನ ಸಭೆ ವಿಫಲ: ಸರ್ಕಾರಕ್ಕೆ ಡೆಡ್ಲೈನ್ ಕೊಟ್ಟ ಕಬ್ಬು ಬೆಳೆಗಾರರು
ಕಬ್ಬಿಗೆ ಬೆಂಬಲ ಬೆಲೆ ಹೆಚ್ಚಿಸಬೇಕೆಂದು ಆಗ್ರಹಿಸಿ ರೈತರು 7 ದಿನಗಳಿಂದ ನಡೆಸುತ್ತಿರುವ ಹೋರಾಟಕ್ಕೆ ವಿಪಕ್ಷಗಳೂ ಕೈ ಜೋಡಿಸಿವೆ. ಹೀಗಾಗಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಕಾನೂನು ಸಚಿವ ಎಚ್ಕೆ ಪಾಟೀಲ್ ಅವರು ಸ್ಥಳಕ್ಕೆ ಆಗಮಿಸಿ ರೈತರ ಆಹವಾಲು ಸಭೆ ನಡೆಸಿದರು. ಆದ್ರೆ, ಸಂಧಾನ ಸಭೆ ವಿಫಲವಾಗಿದೆ. ಸಂಧಾನ ಸಭೆ ವಿಫಲವಾಗುತ್ತಿದ್ದಂತೆಯೇ ರೈತರು ಸಚಿವರ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದರು. ಕಾರಿಗೆ ಗುದ್ದಿ ಬೇಕೇ ಬೇಕು ನ್ಯಾಯ ಬೇಕೆಂದು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತುದ್ದ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಇದರಿಂದ ಪೊಲೀಸರು ಹಾಗೂ ಕಬ್ಬು ಬೆಳೆಗಾರರ ನಡುವೆ ತಳ್ಳಾಟ ನೂಕಾಟ ಉಂಟಾಯ್ತು.
ಬೆಳಗಾವಿ, (ನವೆಂಬರ್ 05): ಕಬ್ಬಿಗೆ ಬೆಂಬಲ ಬೆಲೆ ಹೆಚ್ಚಿಸಬೇಕೆಂದು ಆಗ್ರಹಿಸಿ ರೈತರು 7 ದಿನಗಳಿಂದ ನಡೆಸುತ್ತಿರುವ ಹೋರಾಟಕ್ಕೆ ವಿಪಕ್ಷಗಳೂ ಕೈ ಜೋಡಿಸಿವೆ. ಹೀಗಾಗಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಕಾನೂನು ಸಚಿವ ಎಚ್ಕೆ ಪಾಟೀಲ್ ಅವರು ಸ್ಥಳಕ್ಕೆ ಆಗಮಿಸಿ ರೈತರ ಆಹವಾಲು ಸಭೆ ನಡೆಸಿದರು. ಆದ್ರೆ, ಸಂಧಾನ ಸಭೆ ವಿಫಲವಾಗಿದೆ. ಸಂಧಾನ ಸಭೆ ವಿಫಲವಾಗುತ್ತಿದ್ದಂತೆಯೇ ರೈತರು ಸಚಿವರ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದರು. ಕಾರಿಗೆ ಗುದ್ದಿ ಬೇಕೇ ಬೇಕು ನ್ಯಾಯ ಬೇಕೆಂದು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತುದ್ದ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಇದರಿಂದ ಪೊಲೀಸರು ಹಾಗೂ ಕಬ್ಬು ಬೆಳೆಗಾರರ ನಡುವೆ ತಳ್ಳಾಟ ನೂಕಾಟ ಉಂಟಾಯ್ತು.
ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿರುವ ರೈತ ಮುಖಂಡ ಶಶಿಕಾಂತ ಪಡಸಲಗಿ, ಸಿಎಂ ಭೇಟಿಗೆ ಬರುವಂತೆ ಸಚಿವರು ನೀಡಿದ ಆಹ್ವಾನವನ್ನು ಒಪ್ಪಲಿಲ್ಲ.ನಾಳೆ (ನವೆಂಬರ್ 06) ಸಂಜೆ 7 ಗಂಟೆಯವರೆಗೆ ಸರ್ಕಾರಕ್ಕೆ ಡೆಡ್ಲೈನ್ ನೀಡಿದ್ದೇವೆ. ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಭೆ ನಡೆಸಿ ನಿರ್ಧಾರ ಮಾಡಲಿ. ಡಿಸಿ ಮೂಲಕ ಶುಭ ಸಂದೇಶ ನೀಡಿದರೆ ಹೋರಾಟ ಹಿಂಪಡೆಯುತ್ತೇವೆ. ಒಂದು ವೇಳೆ ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ದರೆ ನವೆಂಬರ್ 7ರಿಂದ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದರು.
