ಕಬ್ಬು ದರ ಬಗ್ಗೆ ಸಿಎಂ ಸಭೆಯಲ್ಲಿ ಏನಾಯ್ತು? ಶುಗರ್ ಫ್ಯಾಕ್ಟರಿ ಓನರ್ ನಿರಾಣಿ ಹೇಳಿದ್ದಿಷ್ಟು
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಮುಕ್ತಾಯಗೊಂಡಿದೆ. ಸಭೆ ಬಳಿಕ ಪ್ರತಿಕ್ರಿಯಿಸಿದ ಮಾಜಿ ಸಚಿವ ಮುರುಗೇಶ್ ನಿರಾಣಿ, ಸಿಎಂ ಜೊತೆ ಕಾರ್ಖಾನೆ ಮಾಲೀಕರ ಮೊದಲ ಹಂತದ ಸಭೆ ನಡೆದಿದೆ. ರೈತರ ಜೊತೆಗಿನ ಸಭೆ ಮುಗಿದ ಬಳಿಕ ಅಂತಿಮ ನಿರ್ಧಾರವಾಗಲಿದೆ ಎಂದು ಹೇಳಿದ್ದಾರೆ.
ಬೆಂಗಳೂರು, ನವೆಂಬರ್ 07: ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ವಿಧಾನಸೌಧದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದಾರೆ. ಸಭೆ ಬಳಿಕ ಟಿವಿ9ಗೆ ಮಾಜಿ ಸಚಿವ ಮುರುಗೇಶ್ ನಿರಾಣಿ ಪ್ರತಿಕ್ರಿಯಿಸಿದ್ದು, ಕಾರ್ಖಾನೆ ಮಾಲೀಕರ ಮೊದಲ ಹಂತದ ಸಭೆ ನಡೆದಿದೆ. ಸಕ್ಕರೆ ಕಾರ್ಖಾನೆ ಮಾಲೀಕರ ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದಿದ್ದೇವೆ. ರೈತರ ಜೊತೆಗಿನ ಸಭೆ ಮುಗಿದ ಬಳಿಕ ಅಂತಿಮ ನಿರ್ಧಾರವಾಗಲಿದೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
