ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್

Edited By:

Updated on: May 03, 2025 | 12:24 PM

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಬೆನ್ನಲ್ಲೇ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೂಡ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಘಟನೆ ಸಂಬಂಧ ಬಂಧಿತರ ಆರೋಪಿಗಳಲ್ಲಿ ಇಬ್ಬರು ಚಿಕ್ಕಮಗಳೂರಿನವರು ಎನ್ನಲಾಗಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಗಮಿಸುತ್ತಿರುವ ವಾಹನಗಳ ತಪಾಸಣೆ ತೀವ್ರಗೊಳಿಸಲಾಗಿದೆ. ನಾಕಾಬಂದಿ ವಿಡಿಯೋ ಇಲ್ಲಿದೆ ನೋಡಿ.

ಚಿಕ್ಕಮಗಳೂರು, ಮೇ 3: ಮಂಗಳೂರಿನ ಬಜ್ಪೆಯಲ್ಲಿ ರೌಡಿಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಘಟನೆ ಸಂಬಂಧ ಬಂಧಿತ 8 ಮಂದಿ ಆರೋಪಿಗಳಲ್ಲಿ ಇಬ್ಬರು ಚಿಕ್ಕಮಗಳೂರಿನವರು ಎನ್ನಲಾಗುತ್ತಿದೆ. ಇದರ ಬೆನ್ನಲ್ಲೇ ಚಿಕ್ಕಮಗಳೂರು ಜಿಲ್ಲೆಯಲ್ಲೂ ಪೊಲೀಸರು ಹೈಅಲರ್ಟ್ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶದಲ್ಲಿ ಪೊಲೀಸ್ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಕೊಟ್ಟಿಗೆಹಾರ ಚೆಕ್ ಪೋಸ್ಟ್​​ನಲ್ಲಿ ಪೊಲೀಸರಿಂದ ವಾಹನಗಳ ತಪಾಸಣೆ ಬಿಗಿಗೊಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಆಗಮಿಸುತ್ತಿರುವ ವಾಹನಗಳ ತಪಾಸಣೆಯನ್ನು ಬಣಕಲ್ ಠಾಣೆ ಪೊಲೀಸರು ತೀವ್ರಗೊಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ