ಒಂದು ಹೆಣ್ಣಿನ ಹಸ್ತಕ್ಷೇಪದಿಂದ ರಾಜ್ಯ ರಾಜಕೀಯ ಏರುಪೇರಾಗುವ ಸಾಧ್ಯತೆ: ದೇವರಗುಡ್ಡ ಕಾರ್ಣಿಕ ನುಡಿ

ಒಂದು ಹೆಣ್ಣಿನ ಹಸ್ತಕ್ಷೇಪದಿಂದ ರಾಜ್ಯ ರಾಜಕೀಯ ಏರುಪೇರಾಗುವ ಸಾಧ್ಯತೆ: ದೇವರಗುಡ್ಡ ಕಾರ್ಣಿಕ ನುಡಿ

ಸೂರಜ್​, ಮಹಾವೀರ್​ ಉತ್ತರೆ
| Updated By: ಗಂಗಾಧರ​ ಬ. ಸಾಬೋಜಿ

Updated on: Oct 23, 2023 | 8:21 PM

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಸುಕ್ಷೇತ್ರ ದೇವರಗುಡ್ಡ ಕಾರ್ಣಿಕ ಇಂದು ನುಡಿಯಲಾಗಿದೆ. ‘ಮುಕ್ಕೋಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್’ ಎಂದು ನಾಗಪ್ಪಜ್ಜ ಉರ್ಮಿ ಗೊರವಯ್ಯಾ ಕಾರ್ಣಿಕ ನುಡಿದಿದ್ದಾರೆ.ಬಳಿಕ ದೇಗುಲದ ಪ್ರಧಾ‌ನ ಅರ್ಚಕ ಸಂತೋಷ ಭಟ್ ಕಾರ್ಣಿಕ ವಿಶ್ಲೇಷಿಸಿದ್ದು, ಒಂದು ಹೆಣ್ಣಿನ ಹಸ್ತಕ್ಷೇಪದಿಂದ ರಾಜ್ಯ ರಾಜಕೀಯ ಏರುಪೇರಾಗುವ ಸಾಧ್ಯತೆ ಎಂದಿದ್ದಾರೆ.

ಹಾವೇರಿ, ಅಕ್ಟೋಬರ್​​​ 23: ‘ಮುಕ್ಕೋಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್’ ಎಂದು ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಸುಕ್ಷೇತ್ರ ದೇವರಗುಡ್ಡದ ಮಾಲತೇಶ ದೇವರ ಕಾರ್ಣಿಕ (karnika bhavishya) ನುಡಿಯಲಾಗಿದೆ. ನಾಗಪ್ಪಜ್ಜ ಉರ್ಮಿ ಗೊರವಯ್ಯಾ ನುಡಿದ ಕಾರ್ಣಿಕವನ್ನು ಬಳಿಕ ದೇಗುಲದ ಪ್ರಧಾ‌ನ ಅರ್ಚಕ ಸಂತೋಷ ಭಟ್​ ವಿಶ್ಲೇಷಿಸಿದ್ದು, ಮುಕ್ಕೋಟಿ ಚಲ್ಲಿತಲೇ ಅಂದರೆ ರೈತರು ಕೋಟ್ಯಂತರ ರೂ. ಭೂಮಿಗೆ ಹಾಕುತ್ತಾರೆ. ರೈತರಿಗೆ ಲಾಭವಾಗುವ ನಿರೀಕ್ಷೆಗಳು ಕಡಿಮೆ. ಕಲ್ಯಾಣಿ ಕಕ್ಕಿತಲೆ ಅಂದರೆ ರಾಜ್ಯ ಸರ್ಕಾರಕ್ಕೆ ಆಪತ್ತು ಬರುವ ಸಾಧ್ಯತೆ. ಒಂದು ಹೆಣ್ಣಿನ ಹಸ್ತಕ್ಷೇಪದಿಂದ ರಾಜ್ಯ ರಾಜಕೀಯ ಏರುಪೇರಾಗುವ ಸಾಧ್ಯತೆ ಎಂದು ಕಾರ್ಣಿಕ ವಿಶ್ಲೇಷಿಸಿದ್ದಾರೆ. ಪ್ರತಿ ವರ್ಷ ದಸರಾ ಹಬ್ಬದ ಆಯುಧ ಪೂಜೆಯಂದು ಕಾರ್ಣಿಕ ನುಡಿಯಲಾಗುತ್ತದೆ. ಒಂಬತ್ತು ದಿನ ಉಪವಾಸವಿದ್ದು ಗೊರವಯ್ಯಾ ಕಾರ್ಣಿಕ ನುಡಿಯುತ್ತಾರೆ. ಬಿಲ್ಲನ್ನೇರಿ ಪ್ರಸಕ್ತ ವರ್ಷದ ಕಾರ್ಣಿಕವನ್ನು ಗೊರವಪ್ಪ ನುಡಿದಿದ್ದಾರೆ. ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ ಸಾವಿರಾರು ಭಕ್ತರು ಭಾಗಿ ಆಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.