ಅಂಬಿ ಸಮಾಧಿಗೆ ಎಡೆ ಇಟ್ಟು ನಮಿಸಿದ ಸುಮಲತಾ ಅಂಬರೀಷ್​; ಸಾಥ್​ ನೀಡಿದ ರಾಕ್​ಲೈನ್​ ವೆಂಕಟೇಶ್​

Ambareesh Birthday: ಅಂಬರೀಷ್​ ಜನ್ಮದಿನದ ಹಿನ್ನೆಲೆಯಲ್ಲಿ ಸಮಾಧಿಯನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ಸುಮಲತಾ, ರಾಕ್​ ಲೈನ್​ ವೆಂಕಟೇಶ್​ ಮುಂತಾದವರು ನಮನ ಸಲ್ಲಿಸಿದ್ದಾರೆ.

TV9kannada Web Team

| Edited By: Madan Kumar

May 29, 2022 | 12:34 PM

ನಟ ಅಂಬರೀಷ್​ ನಮ್ಮೊಂದಿಗೆ ಇದ್ದಿದ್ದರೆ ಇಂದು (ಮೇ 29) ಅವರು 70ನೇ ವರ್ಷದ ಹುಟ್ಟುಹಬ್ಬವನ್ನು (Ambareesh Birthday) ಆಚರಿಸಿಕೊಳ್ಳುತ್ತಿದ್ದರು. ಅವರ ಅನುಪಸ್ಥಿತಿ ಎಲ್ಲರನ್ನೂ ಕಾಡುತ್ತಿದೆ. 70ನೇ ಬರ್ತ್​ಡೇ ಪ್ರಯುಕ್ತ ಕುಟುಂಬದವರು, ಸ್ನೇಹಿತರು ಹಾಗೂ ಅಭಿಮಾನಿಗಳು ಅಂಬಿ ಸಮಾಧಿಗೆ ಭೇಟಿ ನೀಡಿ ನಮಿಸಿದ್ದಾರೆ. ಸುಮಲತಾ ಅಂಬರೀಷ್​ (Sumalatha Ambareesh) ಅವರು ಕೂಡ ಪತಿಯ ಸಮಾಧಿಗೆ ಎಡೆ ಇಟ್ಟು ಪೂಜೆ ಸಲ್ಲಿಸಿದ್ದಾರೆ. ಅವರ ಜೊತೆಗೆ ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ (Rockline Venkatesh) ಕೂಡ ಆಗಮಿಸಿದ್ದಾರೆ. ಅಂಬಿ ಜನ್ಮದಿನದ ಹಿನ್ನೆಲೆಯಲ್ಲಿ ಸಮಾಧಿಯನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ದೂರದ ಊರುಗಳಿಂದ ಬಂದ ಅಭಿಮಾನಿಗಳು ಕೂಡ ನಮನ ಸಲ್ಲಿಸಿದ್ದಾರೆ. ‘ರೆಬೆಲ್​ ಸ್ಟಾರ್​’ ಜನ್ಮದಿನದ ಪ್ರಯುಕ್ತ ಅನೇಕ ಕಡೆಗಳಲ್ಲಿ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

Follow us on

Click on your DTH Provider to Add TV9 Kannada