ದರ್ಶನ್ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಸುಮಲತಾ ಹೇಳಿದ ಕಿವಿಮಾತು ಏನು?
ಕೊಲೆ ಆರೋಪದಲ್ಲಿ ಜೈಲು ಸೇರಿರುವ ದರ್ಶನ್ ಬಗ್ಗೆ ಅಭಿಮಾನಿಗಳು ಅನೇಕ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ದರ್ಶನ್ ಮಾಡಿದ್ದರಲ್ಲಿ ತಪ್ಪು ಇಲ್ಲ ಎಂದು ಸಮರ್ಥನೆ ಮಾಡಿಕೊಳ್ಳುತ್ತಿರುವ ಫ್ಯಾನ್ಸ್ ಕೂಡ ಇದ್ದಾರೆ. ಅಂಥವರಿಗೆ ನಟಿ ಸುಮಲತಾ ಅಂಬರೀಷ್ ಅವರು ಒಂದು ಕಿವಿಮಾತು ಹೇಳಿದ್ದಾರೆ. ಇದೇ ಮೊದಲ ಬಾರಿಗೆ ಈ ಕೇಸ್ನ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.
ನಟ ದರ್ಶನ್ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಇದ್ದಾರೆ. ಈಗ ದರ್ಶನ್ ಮೇಲೆ ಗಂಭೀರ ಆರೋಪ ಬಂದಿದ್ದರೂ ಕೂಡ ಅವರನ್ನು ಕೆಲವು ಅಭಿಮಾನಿಗಳು ಬಿಟ್ಟುಕೊಡುತ್ತಿಲ್ಲ. ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಎ2 ಆಗಿದ್ದಾರೆ. ಆದರೆ ದರ್ಶನ್ ಮಾಡಿದ್ದು ಸರಿ ಇದೆ ಎಂದು ಕೆಲವು ಫ್ಯಾನ್ಸ್ ಹೇಳಿಕೆ ನೀಡುತ್ತಿದ್ದಾರೆ. ಅಂಥವರ ಬಗ್ಗೆ ನಟಿ ಸುಮಲತಾ ಅಂಬರೀಷ್ ಮಾತನಾಡಿದ್ದಾರೆ. ‘ದರ್ಶನ್ ಅವರ ಅಭಿಮಾನಿಗಳಲ್ಲಿ ನಾವು ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ಮನವಿ ಮಾಡಿಕೊಂಡಿದ್ದೇನೆ. ಈ ಸಂದರ್ಭದಲ್ಲಿ ಯಾರಿಗೂ ನೋವಾಗುವಂತಹ ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ಇದು ಗಂಭೀರವಾದ ಪ್ರಕರಣ ಆದ್ದರಿಂದ ನಾವು ಸೂಕ್ಷ್ಮತೆಯನ್ನು ಅರ್ಥ ಮಾಡಿಕೊಂಡು ವರ್ತಿಸಬೇಕು’ ಎಂದು ಸುಮಲತಾ ಅಂಬರೀಷ್ ಹೇಳಿದ್ದಾರೆ. ದರ್ಶನ್ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ ಎಂಬ ಕಾರಣಕ್ಕಾಗಿ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಅಪಹರಿಸಿ, ಹತ್ಯೆ ಮಾಡಿದ ಆರೋಪ ದರ್ಶನ್ ಹಾಗೂ ಸಹಚರರ ಮೇಲಿದೆ. ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನವನ್ನು ಜುಲೈ 18ರ ತನಕ ವಿಸ್ತರಿಸಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.