ಶ್ರೀರಂಗಪಟ್ಟಣ: ಕಾಶಿ ಚಂದ್ರಮೌಳೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ; ಕಣ್ತುಂಬಿಕೊಂಡ ಭಕ್ತ ಸಾಗರ
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕಾಶಿ ಚಂದ್ರಮೌಳೇಶ್ವರನಿಗೆ ಪ್ರಥಮ ಸೂರ್ಯ ರಶ್ಮಿ ಸ್ಪರ್ಶಗೊಂಡಿದೆ.
ಮಂಡ್ಯ: ನಾಡಿನೆಲ್ಲೆಡೆ ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಸಡಗರ ಮನೆಮಾಡಿದೆ. ಅದ್ರಲ್ಲೂ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕಾಶಿ ಚಂದ್ರಮೌಳೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶವಾಗಿದೆ. ಪ್ರತಿ ವರ್ಷ ಮಕರ ಸಂಕ್ರಾಂತಿಯಂದು ನಡೆಯುವ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಭಕ್ತಸಾಗರವೇ ಹರಿದು ಬರುತ್ತದೆ. ಪ್ರತಿ ವರ್ಷದಂತೆ ಈ ವರ್ಷ ಬೆಳಗ್ಗೆ 7.13ಕ್ಕೆ ಶಿವಲಿಂಗದ ಮೇಲೆ ಸೂರ್ಯ ರಶ್ಮಿ ಸ್ಪರ್ಶಿಸಿದೆ. ಸೂರ್ಯ ರಶ್ಮಿ ಸ್ಪರ್ಶದ ಬಳಿಕ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿತು.
Published on: Jan 15, 2023 03:58 PM
Latest Videos