ಅಕ್ರಮ ಭೂಮಿ ಮಂಜೂರು ಆರೋಪ: ಕುಮಾರಸ್ವಾಮಿ ಉತ್ತರ
HD Kumaraswamy Press Meet Live: ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ನಿಯಮ ಉಲ್ಲಂಘಿಸಿ ಗಣಿ ಗುತ್ತಿಗೆ ಭೂಮಿ ಮಂಜೂರು ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ಕೋರಿ ಎಸ್ಐಟಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಈ ವಿಚಾರವಾಗಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್ ಇಲ್ಲಿದೆ
ಮುಡಾ ಹಗರಣಕ್ಕೆ ಸಂಬಂಧಿಸಿಂದತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಇದರ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲು ಅನುಮತಿ ಕೋರಿ ಲೋಕಾಯುಕ್ತ ಎಸ್ಐಟಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದೆ. 2007ರಲ್ಲಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ನಿಯಮ ಉಲ್ಲಂಘಿಸಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ (SSVM) ಕಂಪನಿಗೆ ಗಣಿ ಗುತ್ತಿಗೆ ಭೂಮಿ ಮಂಜೂರು ಮಾಡಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ಕೋರಿ ಎಸ್ಐಟಿ (SIT) ರಾಜ್ಯಪಾಲರಿಗೆ ಪತ್ರ ಬರೆದಿದೆ. ಈ ವಿಚಾರವಾಗಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿದರು.
Published on: Aug 21, 2024 11:10 AM
Latest Videos