AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್

ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್

ರಾಜೇಶ್ ದುಗ್ಗುಮನೆ
|

Updated on:Sep 30, 2026 | 10:55 AM

Share

ಟಿ.ನರಸೀಪುರ ತಾಲೂಕಿನ ಸೋಮನಾಥಪುರದ ಕೇಶವ ದೇಗುಲದಲ್ಲಿ ಸೂಪರ್‌ಸ್ಟಾರ್‌ ತಮ್ಮ ಧರ್ಮನ್‌ ಚಲನಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿದರು. ಈ ವೇಳೆ ರಜನಿಕಾಂತ್‌ರನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿ, ತಲೈವಾ ಘೋಷಣೆಗಳನ್ನು ಕೂಗಿದರು. ಆಟೋದಲ್ಲಿ ಬಂದ ನಟ ಅಭಿಮಾನಿಗಳತ್ತ ಕೈಬೀಸಿ ಸಂಭ್ರಮ ಹಂಚಿಕೊಂಡರು .

ಟಿ.ನರಸೀಪುರ ತಾಲೂಕಿನ ಐತಿಹಾಸಿಕ ಸೋಮನಾಥಪುರಕ್ಕೆ ಸೂಪರ್‌ಸ್ಟಾರ್‌ ರಜನಿಕಾಂತ್‌ ಅವರು ಭೇಟಿ ನೀಡಿದ್ದು, ಅವರ ಮುಂಬರುವ ಧರ್ಮನ್‌ ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಸೋಮನಾಥಪುರದ ಕೇಶವ ದೇಗುಲದಲ್ಲಿ ಚಿತ್ರೀಕರಣ ನಡೆದಿದ್ದು, ಸ್ಥಳೀಯರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಅಪಾರ ಸಂಖ್ಯೆಯ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ನೋಡಲು ಮುಗಿಬಿದ್ದರು.

ರಜನಿಕಾಂತ್‌ ಆಗಮನದ ಸುದ್ದಿ ತಿಳಿಯುತ್ತಿದ್ದಂತೆ, ದೇಗುಲದ ಆವರಣದಲ್ಲಿ ಅಭಿಮಾನಿಗಳ ದಂಡು ಸೇರಿತು. ಪ್ರತಿಯೊಬ್ಬರೂ ತಲೈವಾ, ಜೈ ತಲೈವಾ ಎಂದು ಘೋಷಣೆಗಳನ್ನು ಕೂಗುತ್ತಾ, ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಳ್ಳಲು ಕಾತರದಿಂದ ಕಾಯುತ್ತಿದ್ದರು. ಈ ಸಂದರ್ಭದಲ್ಲಿ ಅಭಿಮಾನಿಗಳ ಕೂಗಾಟ ಮತ್ತು ಚಪ್ಪಾಳೆ ಸದ್ದು ಮುಗಿಲು ಮುಟ್ಟಿತ್ತು.

ನಟ ರಜನಿಕಾಂತ್‌ ಅವರು ಆಟೋ-ರಿಕ್ಷಾದಲ್ಲಿ ಸ್ಥಳಕ್ಕೆ ಆಗಮಿಸಿದ್ದು, ಇದು ಅಭಿಮಾನಿಗಳಿಗೆ ಇನ್ನಷ್ಟು ಅಚ್ಚರಿ ಮತ್ತು ಸಂತಸವನ್ನು ತಂದಿತು. ಆಟೋದಲ್ಲಿ ಕುಳಿತಿದ್ದಾಗಲೇ ಅವರು ಅಭಿಮಾನಿಗಳತ್ತ ಕೈಬೀಸಿದರು. ರಜನಿಕಾಂತ್‌ರನ್ನು ಹತ್ತಿರದಿಂದ ನೋಡಿದ ಅಭಿಮಾನಿಗಳು ಹರ್ಷೋದ್ಗಾರ ಮಾಡಿದರು. ಜನಸಾಗರದ ನಡುವೆ ರಜನಿಕಾಂತ್‌ ಅವರ ಉಪಸ್ಥಿತಿಯು ಸೋಮನಾಥಪುರದಲ್ಲಿ ವಿಶೇಷ ವಾತಾವರಣವನ್ನು ಸೃಷ್ಟಿಸಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Sep 30, 2026 10:54 AM

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More