ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರಿಗೆ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಹಾಗೂ ಯೋಗೇಶ್ ಗೌಡ ಅವರ ಸಹೋದರ ಗುರುನಾಥ ಗೌಡ ಸಲ್ಲಿಸಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ಈ ತೀರ್ಪು ಬಂದಿದೆ. ಈ ಬಗ್ಗೆ ವಕೀಲರು ಮಾತನಾಡಿರುವ ವಿಡಿಯೋ ಇಲ್ಲಿದೆ.
ನವದೆಹಲಿ, ನವೆಂಬರ್ 25: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ರದ್ದುಗೊಳಿಸಿರುವ ಸರ್ವೋಚ್ಚ ನ್ಯಾಯಾಲಯ, ಕುಲಕರ್ಣಿ ಸೇರಿದಂತೆ ಪ್ರಕರಣದ 12 ಮಂದಿ ಆರೋಪಿಗಳು ಎರಡು ವಾರಗಳೊಳಗೆ ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಸೂಚಿಸಿದೆ. ಈ ಬಗ್ಗೆ ಸಿಬಿಐ ದಾಖಲಿಸಿದ್ದ ಪ್ರಕರಣದ ದೂರುದಾರ ಗುರುನಾಥ ಗೌಡ ಪರ ವಕೀಲರು ಪ್ರತಿಕ್ರಿಯಿಸಿದ್ದು, ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ, ಆರೋಪಿಗಳು 14 ದಿನಗಳೊಳಗೆ ಶರಣಾಗುವಂತೆ ನಿರ್ದೇಶನ ನೀಡಿದೆ. ನ್ಯಾಯಾಲಯವು ಸದ್ಯ ಎರಡು ಸಾಲಿನ ಪ್ರಮುಖ ಆದೇಶವನ್ನು ಪ್ರಕಟಿಸಿದ್ದು, ವಿವರವಾದ ತೀರ್ಪಿನ ಪ್ರತಿ ಇನ್ನಷ್ಟೇ ಬಿಡುಗಡೆಯಾಗಬೇಕಿದೆ ಎಂದು ತಿಳಿಸಿದ್ದಾರೆ.
ವರದಿ: ನಟರಾಜ್, ಟಿವಿ9, ನವದೆಹಲಿ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
