AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಯೋಗೀಶ್ ಗೌಡ ಸಹೋದರ ಗುರುನಾಥ್‌ ಗೌಡ ಹರ್ಷ

ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಯೋಗೀಶ್ ಗೌಡ ಸಹೋದರ ಗುರುನಾಥ್‌ ಗೌಡ ಹರ್ಷ

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Nov 25, 2026 | 2:38 PM

Share

ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿದ್ದು, ಎರಡು ವಾರಗಳಲ್ಲಿ ಅವರು ಜೈಲು ಸೇರಲಿದ್ದಾರೆ. ಯೋಗೀಶ್ ಗೌಡ ಸಹೋದರ ಗುರುನಾಥ್‌ಗೌಡ, ದಶಕದ ಸುದೀರ್ಘ ಹೋರಾಟದ ನಂತರ ನ್ಯಾಯ ದೊರಕಿದೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಎಲ್ಲರಿಗೂ ಒಂದೇ ನ್ಯಾಯ ಎಂಬುದು ಸಾಬೀತಾಗಿದೆ ಎಂದು ಅವರು ತಿಳಿಸಿದ್ದಾರೆ.

ಧಾರವಾಡ, ನವೆಂಬರ್​​ 25: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಪ್ರಮುಖ ಆರೋಪಿ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸಿದೆ. ಈ ಆದೇಶದ ಬೆನ್ನಲ್ಲೇ, ವಿನಯ್ ಕುಲಕರ್ಣಿ ಎರಡು ವಾರಗಳಲ್ಲಿ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಳಪಡಬೇಕಾಗಿದೆ. ಸುಪ್ರೀಂ ಕೋರ್ಟ್‌ನ ಈ ತೀರ್ಪಿನ ಕುರಿತು ಯೋಗೀಶ್ ಗೌಡ ಅವರ ಸಹೋದರ ಗುರುನಾಥ್‌ ಗೌಡ ಹರ್ಷ ವ್ಯಕ್ತಪಡಿಸಿದ್ದಾರೆ. ಹತ್ತು ವರ್ಷಗಳ ನಿರಂತರ ಹೋರಾಟದ ನಂತರ ನ್ಯಾಯ ದೊರಕಿದೆ ಎಂದು ಅವರು ತಿಳಿಸಿದ್ದಾರೆ. ಹೈಕೋರ್ಟ್‌ನ ಆದೇಶದಿಂದ ನಮಗೆ ದುಃಖವಾಗಿತ್ತು, ಆದರೆ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸವಿತ್ತು. ಇಂದು ಆ ಭರವಸೆ ನಿಜವಾಗಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Nov 25, 2026 02:37 PM

Follow Us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More