ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಯೋಗೀಶ್ ಗೌಡ ಸಹೋದರ ಗುರುನಾಥ್ ಗೌಡ ಹರ್ಷ
ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿದ್ದು, ಎರಡು ವಾರಗಳಲ್ಲಿ ಅವರು ಜೈಲು ಸೇರಲಿದ್ದಾರೆ. ಯೋಗೀಶ್ ಗೌಡ ಸಹೋದರ ಗುರುನಾಥ್‌ಗೌಡ, ದಶಕದ ಸುದೀರ್ಘ ಹೋರಾಟದ ನಂತರ ನ್ಯಾಯ ದೊರಕಿದೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಎಲ್ಲರಿಗೂ ಒಂದೇ ನ್ಯಾಯ ಎಂಬುದು ಸಾಬೀತಾಗಿದೆ ಎಂದು ಅವರು ತಿಳಿಸಿದ್ದಾರೆ.
ಧಾರವಾಡ, ನವೆಂಬರ್ 25: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಪ್ರಮುಖ ಆರೋಪಿ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸಿದೆ. ಈ ಆದೇಶದ ಬೆನ್ನಲ್ಲೇ, ವಿನಯ್ ಕುಲಕರ್ಣಿ ಎರಡು ವಾರಗಳಲ್ಲಿ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಳಪಡಬೇಕಾಗಿದೆ. ಸುಪ್ರೀಂ ಕೋರ್ಟ್‌ನ ಈ ತೀರ್ಪಿನ ಕುರಿತು ಯೋಗೀಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಹರ್ಷ ವ್ಯಕ್ತಪಡಿಸಿದ್ದಾರೆ. ಹತ್ತು ವರ್ಷಗಳ ನಿರಂತರ ಹೋರಾಟದ ನಂತರ ನ್ಯಾಯ ದೊರಕಿದೆ ಎಂದು ಅವರು ತಿಳಿಸಿದ್ದಾರೆ. ಹೈಕೋರ್ಟ್‌ನ ಆದೇಶದಿಂದ ನಮಗೆ ದುಃಖವಾಗಿತ್ತು, ಆದರೆ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸವಿತ್ತು. ಇಂದು ಆ ಭರವಸೆ ನಿಜವಾಗಿದೆ ಎಂದು ಅವರು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 25, 2026 02:37 PM
Loading...
Unable to load recommendations.
Follow Us
