AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿಸೆಂಬರ್ 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ ಕೋರ್ಟ್

ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿಸೆಂಬರ್ 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ ಕೋರ್ಟ್

ಪ್ರಸನ್ನ ಗಾಂವ್ಕರ್​
| Edited By: |

Updated on:Jul 17, 2026 | 2:29 PM

Share

GBA Elections; ಕರ್ನಾಟಕದಲ್ಲಿ SIR ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಯನ್ನು ನಡೆಸಲು ಸುಪ್ರೀಂ ಕೋರ್ಟ್ ಡಿಸೆಂಬರ್ 31ರ ಗಡುವು ವಿಧಿಸಿದೆ. ಎಸ್​ಐಆರ್ ಪ್ರಕ್ರಿಯೆ ಕಾರಣ ಚುನಾವಣೆ ಮುಂದೂಡಲು ಸರ್ಕಾರ ಮಾಡಿದ್ದ ಮನವಿಗೆ ಕೋರ್ಟ್​ ಅನುಮತಿ ನೀಡಿದೆ. ಆದರೆ, ಡಿಸೆಂಬರ್ 31ರೊಳಗೆ ಚುನಾವಣೆ ಪೂರ್ಣಗೊಳಿಸುವಂತೆ ನ್ಯಾಯಪೀಠ ನಿರ್ದೇಶನ ನೀಡಿದೆ.

ನವದೆಹಲಿ, ಜುಲೈ 17: ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಡಿಸೆಂಬರ್‌ 31ರ ಒಳಗೆ ನಡೆಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ. ಕರ್ನಾಟಕದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ನವೆಂಬರ್ ವೇಳೆಗೆ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ, ಚುನಾವಣೆ ನಡೆಸಲು ಡಿಸೆಂಬರ್ 31ರ ಡೆಡ್​ಲೈನ್ ನಿಗದಿಪಡಿಸಲಾಗಿದೆ. ಎಸ್​ಐಆರ್ ಹಿನ್ನೆಲೆ ಚುನಾವಣೆ ಮುಂದೂಡಲು ಅವಕಾಶ ನೀಡಬೇಕೆಂಬ ಸರ್ಕಾರದ ಮನವಿಯ ಅರ್ಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. SIR ಪ್ರಕ್ರಿಯೆ ನಡೆಯುತ್ತಿರುವ ಕಾರಣ ಆಗಸ್ಟ್ 31ರೊಳಗೆ ಚುನಾವಣೆ ನಡೆಸುವುದು ಸಾಧ್ಯವಾಗುವುದಿಲ್ಲ ಎಂದು ಸರ್ಕಾರ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು.

ಸರ್ಕಾರದ ಮನವಿಯನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಡಿಸೆಂಬರ್ 31ರ ಒಳಗೆ ಚುನಾವಣೆ ನಡೆಸಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸ್ಪಷ್ಟ ಸೂಚನೆ ನೀಡಿದೆ. ಜೊತೆಗೆ, ಡಿಸೆಂಬರ್‌ನಲ್ಲಿ ಮತ್ತೊಂದು ಕಾರಣ ನೀಡಿ ಚುನಾವಣೆ ಮುಂದೂಡುವಂತೆ ಮನವಿ ಮಾಡಬಾರದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ವಿಚಾರಣೆ ವೇಳೆ ಸರ್ಕಾರದ ಪರ ಹಾಜರಾಗಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, ಮುಂದೆ ಮತ್ತೊಮ್ಮೆ ಮುಂದೂಡಿಕೆಗೆ ಮನವಿ ಮಾಡುವ ಪರಿಸ್ಥಿತಿ ಬಂದರೆ ಸರ್ಕಾರದ ಪರ ತಾವು ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ನ್ಯಾಯಾಲಯಕ್ಕೆ ಮುಂದೆ ತಿಳಿಸಿದ್ದಾರೆ. ಈ ಮೊದಲು ಸುಪ್ರೀಂ ಕೋರ್ಟ್ ಆಗಸ್ಟ್ 31ರೊಳಗೆ ಚುನಾವಣೆ ನಡೆಸುವಂತೆ ಗಡುವು ನೀಡಿತ್ತು. ಆದರೆ, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಇದೀಗ ಆ ಗಡುವನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 17, 2026 02:01 PM

Follow Us