ಸುಪ್ರೀಂ ಕೋರ್ಟ್ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ರಿಲೀಫ್.. ಡಿಕೆ ಶಿವಕುಮಾರ್ ರಿಯಾಕ್ಷನ್
Defamation Relief to Rahul Gandhi: ಅನ್ಯಾಯಕ್ಕೆ ಖಂಡಿತ ನ್ಯಾಯ ಸಿಗಲಿದೆ. ರಾಹುಲ್ ಗಾಂಧಿ ಅವರು 7 ಲಕ್ಷ ಮತಗಳಿಂದ ಗೆದ್ದು ಲೋಕಸಭೆಗೆ ಪ್ರವೇಶಿಸಿದ್ದರು. ಅವರು ಎಂಪಿ ಆಗಿರಬೇಕು, ದೇಶದ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು, ಆಗಸ್ಟ್ 4: ಸಂಸತ್ ಸದಸ್ಯತ್ವ ಕಳೆದುಕೊಂಡ ಪ್ರಕರಣದಲ್ಲಿ ( defamation complaint) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಸುಪ್ರೀಂ ಕೋರ್ಟ್ (Supreme Court) ಬಿಗ್ ರೀಲೀಫ್ ನೀಡಿರುವ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ (KPCC president DK Shivakumar) ಬೆಂಗಳೂರಿನಲ್ಲಿ ಇಂದು ಪ್ರತಿಕ್ರಿಯೆ ನೀಡಿದ್ದಾರೆ. ನಮಗೆ ನ್ಯಾಯಲಯದ ಬಗ್ಗೆ ನಂಬಿಕೆ ಇದೆ. ಆಗಿರೋ ಅನ್ಯಾಯಕ್ಕೆ ಖಂಡಿತ ನ್ಯಾಯ ಸಿಗಲಿದೆ. ರಾಹುಲ್ ಗಾಂಧಿ ಅವರು 7 ಲಕ್ಷ ಮತಗಳಿಂದ ಗೆದ್ದು ಲೋಕಸಭೆಗೆ ಪ್ರವೇಶಿಸಿದ್ದರು. ಅವರು ಎಂಪಿ ಆಗಿರಬೇಕು, ದೇಶದ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ. ಪುಲಿಕೇಶಿ ನಗರದಲ್ಲಿ ಇಂದು ಕಾಂಗ್ರೆಸ್ ಪಕ್ಷದ ಎಸಿ ಶ್ರೀನಿವಾಸ್ ಅವರ ಶಾಸಕರ ಕಚೇರಿ ಉದ್ಘಾಟನೆ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಡಿಸಿಎಂ ಡಿ.ಕೆ ಶಿವಕುಮಾರ್ ಅವರು ನೂತನ ಕಚೇರಿ ಉದ್ಘಾಟಿಸುವ ವೇಳೆ ಶಾಸಕರ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು. ಈ ಹಿಂದೆ ಅಖಂಡ ಶ್ರೀನಿವಾಸ ಮೂರ್ತಿ ಶಾಸಕರಾಗಿದ್ದ ವೇಳೆ ಪ್ರಚೋದನಕಾರಿ ಪೋಸ್ಟ್ ಹಾಕಿದ್ದರು ಅನ್ನೋ ಕಾರಣಕ್ಕೆ ಶಾಸಕರ ಕಚೇರಿ ಮೇಲೆ ದಾಳಿಯಾಗಿತ್ತು. ಈಗ ಹೊಸ ಶಾಸಕರ ಕಚೇರಿ ಉದ್ಘಾಟನೆಗೊಳ್ಳುತ್ತಿದೆ. ಅದ್ದೂರಿಯಾಗಿ ನಿರ್ಮಾಣಗೊಂಡಿರುವ ಹೊಸ ಶಾಸಕರ ಭವನ ಇದಾಗಿದೆ. ಚೆಂಡೆ, ಕಹಳೆ ವಾದ್ಯ ಮೇಳದೊಂದಿಗೆ ಉದ್ಘಾಟನೆಗೊಂಡಿದೆ. ಈ ಹಿಂದೆ ಶಾಸಕರ ಕಚೇರಿ ಹಂಚಿನದ್ದಾಗಿತ್ತು. ಇಂದು ಆರ್.ಸಿ.ಸಿ ಹಾಕಿ, ಎರಡು ಅಂತಸ್ತಿನಲ್ಲಿ ಕಚೇರಿ ನಿರ್ಮಾಣ ಮಾಡಲಾಗಿದೆ ಎಂಬುದು ಗಮನಾರ್ಹ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ