AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ದೇಣಿಗೆ ವಿವಾದ: ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್

ಅಯೋಧ್ಯೆ ದೇಣಿಗೆ ವಿವಾದ: ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್

ನಯನಾ ರಾಜೀವ್
|

Updated on: Jul 13, 2026 | 2:49 PM

Share

ಅಯೋಧ್ಯೆ ರಾಮ ಮಂದಿರ ದೇಣಿಗೆ ಅಕ್ರಮ ಸಂಬಂಧ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿರುವ ಸುಪ್ರೀಂ, ವಿಶೇಷ ತನಿಖಾ ದಳ (SIT) ತನಿಖೆಯ ಪ್ರಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಒಂದು ವಾರದೊಳಗೆ ಸಲ್ಲಿಸುವಂತೆ ಸೂಚಿಸಿದೆ. ಅರ್ಜಿದಾರರು ತನಿಖಾ ವರದಿ ನೋಡಲು ಬಯಸಿದ್ದಾರೆ.

ಅಯೋಧ್ಯೆ, ಜುಲೈ 13: ಅಯೋಧ್ಯೆ ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರಾಮ ಮಂದಿರ ಟ್ರಸ್ಟ್, ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (SIT) ನಡೆಸಿರುವ ತನಿಖೆಯ ಪ್ರಗತಿ ವರದಿಯನ್ನು ಒಂದು ವಾರದೊಳಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಈ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸಬೇಕು ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಅರ್ಜಿದಾರರು ತನಿಖಾ ವರದಿಯನ್ನು ನೋಡಲು ಬಯಸಿದ್ದು, ಈ ಹಿನ್ನೆಲೆಯಲ್ಲಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಸೂಚಿಸಲಾಗಿದೆ.

ಮುಚ್ಚಿದ ಲಕೋಟೆಯಲ್ಲಿ ತನಿಖಾ ವರದಿ ಸಲ್ಲಿಸಲು ಸಿದ್ಧ ಎಂದು ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಂದಿನ ವಿಚಾರಣೆಯನ್ನು ಜುಲೈ 20ಕ್ಕೆ ಮುಂದೂಡಿದೆ. ಈ ಮಧ್ಯೆ, ಎಸ್ಐಟಿ ಇದುವರೆಗೆ ಎಷ್ಟು ಜನರ ವಿಚಾರಣೆ ನಡೆಸಿದೆ ಮತ್ತು ಏನು ಕಂಡುಕೊಂಡಿದೆ ಎಂಬ ಸಂಪೂರ್ಣ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us