ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂ ಕೋರ್ಟ್ ಕೇಳಿದ ಪ್ರಶ್ನೆ ಏನು?
ಜಾಮೀನು ವಿಚಾರಣೆ ವೇಳೆ ಪವಿತ್ರಾ ಗೌಡ ಹಾಗೂ ದರ್ಶನ್ ಸಂಬಂಧದ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ ಮಾಡಿದೆ. ಆ ಬಗ್ಗೆ ವಕೀಲರು ಮಾಹಿತಿ ನೀಡಿದ್ದಾರೆ. ದರ್ಶನ್ಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಮಾಡಬೇಕು ಎಂದು ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.
ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ (Renukaswamy Murder Case) ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು. ಅದರ ವಿಚಾರಣೆ ಇಂದು (ಏಪ್ರಿಲ್ 22) ನಡೆದಿದ್ದು, ಈ ವೇಳೆ ದರ್ಶನ್ (Darshan) ಮತ್ತು ಪವಿತ್ರಾ ಗೌಡ ಸಂಬಂಧದ ಬಗ್ಗೆ ಪ್ರಶ್ನೆ ಎದುರಾಯಿತು. ಪವಿತ್ರಾ ಗೌಡ (Pavithra Gowda) ಅವರು ದರ್ಶನ್ ಪತ್ನಿಯೇ ಎಂದು ಜಡ್ಜ್ ಕೇಳಿದರು. ‘ಪತ್ನಿ ಅಲ್ಲ, ಪರಸ್ತ್ರೀ’ ಎಂದು ರಾಜ್ಯ ಸರ್ಕಾರದ ಪರ ವಕೀಲರು ಮಾಹಿತಿ ತಿಳಿಸಿದರು. ಎರಡೂ ಕಡೆ ವಾದವನ್ನು ಆಲಿಸಲಾಗಿದೆ. ಸದ್ಯಕ್ಕೆ ಈ ವಿಚಾರಣೆ ಮೇ 14ಕ್ಕೆ ಮುಂದೂಡಿಕೆ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.