ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂ ಕೋರ್ಟ್ ಕೇಳಿದ ಪ್ರಶ್ನೆ ಏನು?

Updated on: Apr 22, 2025 | 6:24 PM

ಜಾಮೀನು ವಿಚಾರಣೆ ವೇಳೆ ಪವಿತ್ರಾ ಗೌಡ ಹಾಗೂ ದರ್ಶನ್ ಸಂಬಂಧದ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ ಮಾಡಿದೆ. ಆ ಬಗ್ಗೆ ವಕೀಲರು ಮಾಹಿತಿ ನೀಡಿದ್ದಾರೆ. ದರ್ಶನ್​ಗೆ ಹೈಕೋರ್ಟ್​ ನೀಡಿದ್ದ ಜಾಮೀನು ರದ್ದು ಮಾಡಬೇಕು ಎಂದು ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು.

ರೇಣುಕಾಸ್ವಾಮಿ ಹತ್ಯೆ ಕೇಸ್​ನಲ್ಲಿ (Renukaswamy Murder Case) ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು. ಅದರ ವಿಚಾರಣೆ ಇಂದು (ಏಪ್ರಿಲ್ 22) ನಡೆದಿದ್ದು, ಈ ವೇಳೆ ದರ್ಶನ್ (Darshan) ಮತ್ತು ಪವಿತ್ರಾ ಗೌಡ ಸಂಬಂಧದ ಬಗ್ಗೆ ಪ್ರಶ್ನೆ ಎದುರಾಯಿತು. ಪವಿತ್ರಾ ಗೌಡ (Pavithra Gowda) ಅವರು ದರ್ಶನ್ ಪತ್ನಿಯೇ ಎಂದು ಜಡ್ಜ್ ಕೇಳಿದರು. ‘ಪತ್ನಿ ಅಲ್ಲ, ಪರಸ್ತ್ರೀ’ ಎಂದು ರಾಜ್ಯ ಸರ್ಕಾರದ ಪರ ವಕೀಲರು ಮಾಹಿತಿ ತಿಳಿಸಿದರು. ಎರಡೂ ಕಡೆ ವಾದವನ್ನು ಆಲಿಸಲಾಗಿದೆ. ಸದ್ಯಕ್ಕೆ ಈ ವಿಚಾರಣೆ ಮೇ 14ಕ್ಕೆ ಮುಂದೂಡಿಕೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More