ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ ಪವಿತ್ರಾ ಗೌಡಗೆ ಮತ್ತೆ ಹಿನ್ನಡೆ

Updated on: Nov 08, 2025 | 11:20 AM

ಜಾಮೀನು ಅರ್ಜಿ ಪುನರ್​​ಪರಿಶೀಲನೆ ಮಾಡುವಂತೆ ಕೋರಿ ಪವಿತ್ರಾ ಗೌಡ ಅವರು ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಈ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ದರ್ಶನ್ ಅವರು ಅರ್ಜಿ ಹಾಕಿದರೂ ಇದೇ ಸ್ಥಿತಿ ಬರುತ್ತದೆ ಎಂದು ಹೇಳಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ.  

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪವಿತ್ರಾ ಗೌಡ ಅವರು ಮತ್ತೆ ಜೈಲು ಸೇರಿದ್ದಾರೆ. ಅವರು ಎ1 ಆರೋಪಿ ಆದರೆ, ದರ್ಶನ್ ಎ2 ಆರೋಪಿ ಆಗಿದ್ದಾರೆ. ಈ ಮೊದಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ವಜಾ ಮಾಡಿತ್ತು. ಇದನ್ನು ಪುನರ್ ಪರಿಶೀಲನೆ ಮಾಡುವಂತೆ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠಕ್ಕೆ ಪವಿತ್ರಾ ಮನವಿ ಮಾಡಿದ್ದರು. ಆದರೆ, ಇದನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆಬಿ ಪರ್ದಿವಾಲ್ ಮತ್ತು ಆರ್. ಮಹಾದೇವನ್ ಅವರ ಪೀಠ ಅರ್ಜಿ ವಜಾ ಮಾಡಿದೆ.

‘ನಾವು ತೀರ್ಪು ಮತ್ತು ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ಆ ಬಳಿಕವೇ ಆದೇಶ ನೀಡಿದ್ದೆವೆ. ಮತ್ತೋಮ್ಮೆ ಪರಿಶೀಲನೆ ನಡೆಸಿ ಆದೇಶ ಮಾಡುವ ಅಗತ್ಯವಿಲ್ಲ’ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಇದರಿಂದ ಅವರಿಗೆ ದೊಡ್ಡ ಹಿನ್ನಡೆ ಆಗಿದೆ. ಹೀಗಾಗಿ, ಮತ್ತೊಂದು ಬಾಗಿಲು ಕೂಡ ಮುಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More