ಭೈರತಿ ಬಸವರಾಜ್ಗೆ ಶಾಕ್ ಮೇಲೆ ಶಾಕ್: ಸುಪ್ರೀಂ ಕೋರ್ಟ್ನಲ್ಲೂ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಬಿಜೆಪಿ ಶಾಸಕ ಭೈರತಿ ಬಸವರಾಜ್ಗೆ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ ಮತ್ತಷ್ಟು ಕಗ್ಗಂಟಾಗುವ ಎಲ್ಲ ಸಾಧ್ಯತೆ ಗೋಚರಿಸಿದೆ. ನಿರೀಕ್ಷಣಾ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್ನಲ್ಲೂ ವಜಾಗೊಂಡಿದ್ದು, ಬಂಧನ ಭೀತಿ ತೀವ್ರಗೊಂಡಿದೆ. ಸದ್ಯ, ಅವರು ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಅವರ ಬಂಧನಕ್ಕೆ ಲುಕ್ಔಟ್ ನೋಟಿಸ್ ಹೊರಡಿಸುವ ಸಾಧ್ಯತೆಯೂ ಇದೆ.
ನವದೆಹಲಿ, ಫೆಬ್ರವರಿ 12: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ಗೆ ಸುಪ್ರೀಂ ಕೋರ್ಟ್ನಲ್ಲೂ ಭಾರೀ ಹಿನ್ನಡೆಯಾಗಿದೆ. ಭೈರತಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದೆ. ಇದರಿಂದ ಭೈರತಿ ಮತ್ತಷ್ಟು ಸಂಕಷ್ಟಕ್ಕೀಡಾದಂತಾಗಿದೆ. ಭೈರತಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಬುಧವಾರ ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಅವರ ಪರ ವಕೀಲ ಮುಕುಲ್ ರೊಹಟಗಿ ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡಿಸಿದರು.
ಏತನ್ಮಧ್ಯೆ, ಭೈರತಿ ಬಸವರಾಜ್ ಈಗಾಗಲೇ ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ದುಬೈಗೆ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.
Follow Us
Latest Videos
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್:FSL ವರದಿಯನ್ನೇ ತಿರುಚಿದ ಗ್ಯಾಂಗ್!

