AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೃಂಗೇರಿ ಮರುಮತ ಎಣಿಕೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ: ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್

ಶೃಂಗೇರಿ ಮರುಮತ ಎಣಿಕೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ: ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್

ಭಾವನಾ ಹೆಗಡೆ
|

Updated on: May 12, 2026 | 10:50 AM

Share

ಶೃಂಗೇರಿ ಕ್ಷೇತ್ರದ ಮರುಮತ ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬಿಜೆಪಿಯ ಜೀವರಾಜ್ ಅವರ ಗೆಲುವಿನ ಹಿನ್ನೆಲೆಯಲ್ಲಿ ಟಿ.ಡಿ. ರಾಜೇಗೌಡರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂ ಕೋರ್ಟ್, ಮರುಮತ ಎಣಿಕೆಯ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಬೆಂಗಳೂರು, ಮೇ 12: ಶೃಂಗೇರಿ ಕ್ಷೇತ್ರದ ಮರುಮತ ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬಿಜೆಪಿಯ ಜೀವರಾಜ್ ಅವರ ಗೆಲುವಿನ ಹಿನ್ನೆಲೆಯಲ್ಲಿ ಟಿ.ಡಿ. ರಾಜೇಗೌಡರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂ ಕೋರ್ಟ್, ಮರುಮತ ಎಣಿಕೆಯ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಶಾಸಕ ಜೀವರಾಜ್, ನ್ಯಾಯಾಲಯದ ಆದೇಶವನ್ನು ಗೌರವಿಸುವುದಾಗಿ ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ಪ್ರಕರಣದ ಬಗ್ಗೆ ಅವಲೋಕಿಸಿ, ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ ಮತ್ತು ಮುಂದಿನ ವಿಚಾರಣೆಯನ್ನು ಅಕ್ಟೋಬರ್ 21ಕ್ಕೆ ನಿಗದಿಪಡಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇದು ಕೇವಲ ಮಧ್ಯಂತರ ಆದೇಶವಾಗಿದ್ದು, ಅಂತಿಮ ತೀರ್ಪಲ್ಲ. ತಡೆಯಾಜ್ಞೆ ನೀಡಿದ ಕಾರಣ, ಹಾಲಿ ಶಾಸಕರೇ ಮುಂದುವರಿಯಲಿದ್ದಾರೆ. ರಾಜಕೀಯದಲ್ಲಿ ಗೆಲುವು-ಸೋಲು ಸಾಮಾನ್ಯ. ಕೋರ್ಟ್ ಆದೇಶವನ್ನು ಎದುರು ನೋಡುತ್ತಿದ್ದೇನೆ ಮತ್ತು ಅಕ್ಟೋಬರ್ 21ರ ನಂತರ ಒಳ್ಳೆಯದಾಗುವ ವಿಶ್ವಾಸವಿದೆ ಎಂದು ಜೀವರಾಜ್ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More