AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸುಪ್ರೀಂ ಕೋರ್ಟ್ ಖಡಕ್ ಸೂಚನೆ; ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!

Video: ಸುಪ್ರೀಂ ಕೋರ್ಟ್ ಖಡಕ್ ಸೂಚನೆ; ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!

ಅಕ್ಷತಾ ವರ್ಕಾಡಿ
|

Updated on:Jul 14, 2026 | 9:16 AM

Share

ಅಯೋಧ್ಯೆಯ ಶ್ರೀರಾಮ ಮಂದಿರ ದೇಣಿಗೆ ಹಣ ಕಳ್ಳತನ ಪ್ರಕರಣವು ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪ್ರಕರಣದ ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಪುರಸ್ಕರಿಸಿದ ನ್ಯಾಯಾಲಯವು, ಕೇಂದ್ರ, ಉತ್ತರ ಪ್ರದೇಶ ಸರ್ಕಾರ ಮತ್ತು ರಾಮಮಂದಿರ ಟ್ರಸ್ಟ್‌ಗೆ ನೋಟಿಸ್ ಜಾರಿ ಮಾಡಿದೆ. ಎಸ್ಐಟಿಗೆ ವಾರದೊಳಗೆ ತನಿಖಾ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದ್ದು, ಪ್ರಕರಣವನ್ನು ಸುಪ್ರೀಂ ಗಂಭೀರವಾಗಿ ಪರಿಗಣಿಸಿದೆ.

ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಹಣ ಕಳ್ಳತನ ಪ್ರಕರಣವು ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪ್ರಕರಣದ ಸಿಬಿಐ ತನಿಖೆಗೆ ಕೋರಿ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿದ್ದು, ಕೇಂದ್ರ ಸರ್ಕಾರ, ಉತ್ತರ ಪ್ರದೇಶ ಸರ್ಕಾರ ಹಾಗೂ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ಗೆ ನೋಟಿಸ್ ಜಾರಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠವು, ಅಯೋಧ್ಯೆ ಕಾಣಿಕೆ ಕಳ್ಳತನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಸ್ತುತ ತನಿಖೆ ನಡೆಸುತ್ತಿರುವ ಎಸ್ಐಟಿಗೆ, ಪ್ರಕರಣದ ಪ್ರಗತಿ ವರದಿಯನ್ನು ಒಂದು ವಾರದೊಳಗೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಅಲ್ಲದೆ, ರಾಮಮಂದಿರ ಟ್ರಸ್ಟ್ ಸದ್ಯಕ್ಕೆ ಯಾವುದೇ ದೊಡ್ಡ ಹಣಕಾಸು ವಹಿವಾಟು ನಡೆಸಬಾರದು ಎಂದು ಖಡಕ್ ಸೂಚನೆ ನೀಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Jul 14, 2026 09:16 AM

Follow Us