ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ!
ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ಕೆಲವು ದಿನಗಳು ಮಾತ್ರ ಬಾಕಿ ಇದ್ದು, ಮೈಸೂರಿನಲ್ಲಿ ಸಕಲ ಸಿದ್ಧತೆಗಳು ಸಹ ಜೋರಾಗಿ ನಡೆದಿವೆ. ಆದ್ರೆ, ಮತ್ತೊಂದೆಡೆ ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ವಿರುದ್ಧದ ಸಮರ ಮುಂದುವರೆದಿದೆ. ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನ ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ನಡೆದಿದ್ದು, ಈಗಾಗಲೇ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಚಾಮುಂಡೇಶ್ವರಿ ಪೂಜೆ ಮಾಡಲು ಹಿಂದೂಯೇತರ ವ್ಯಕ್ತಿಗೆ ಆಹ್ವಾನ ನೀಡಲಾಗಿದೆ ಎಂದು ಬೆಂಗಳೂರು ನಿವಾಸಿ ಹೆಚ್.ಎಸ್.ಗೌರವ್ ಅವರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರು, (ಸೆಪ್ಟೆಂಬರ್ 18): ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ಕೆಲವು ದಿನಗಳು ಮಾತ್ರ ಬಾಕಿ ಇದ್ದು, ಮೈಸೂರಿನಲ್ಲಿ ಸಕಲ ಸಿದ್ಧತೆಗಳು ಸಹ ಜೋರಾಗಿ ನಡೆದಿವೆ. ಆದ್ರೆ, ಮತ್ತೊಂದೆಡೆ ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ವಿರುದ್ಧದ ಸಮರ ಮುಂದುವರೆದಿದೆ. ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನ ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ನಡೆದಿದ್ದು, ಈಗಾಗಲೇ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಚಾಮುಂಡೇಶ್ವರಿ ಪೂಜೆ ಮಾಡಲು ಹಿಂದೂಯೇತರ ವ್ಯಕ್ತಿಗೆ ಆಹ್ವಾನ ನೀಡಲಾಗಿದೆ ಎಂದು ಬೆಂಗಳೂರು ನಿವಾಸಿ ಹೆಚ್.ಎಸ್.ಗೌರವ್ ಅವರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇನ್ನು ಈ ಅರ್ಜಿಯನ್ನು ತುರ್ತು ವಿಚಾರಣೆಗೆ ಪಟ್ಟಿಮಾಡುವಂತೆ ವಕೀಲರು ಸಿಜೆಐ ಪೀಠಕ್ಕೆ ಮನವಿ ಮಾಡಿದ್ದು, ಇದನ್ನು ತುರ್ತಾಗಿ ಪಟ್ಟಿ ಮಾಡಲು ಸಿಜೆಐ ಬಿ.ಆರ್. ಗವಾಯಿ ಒಪ್ಪಿಗೆ ಸೂಚಿಸಿದ್ದಾರೆ.
