AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ರಿಟ್ ಅರ್ಜಿ, ಸುಪ್ರೀಂನಲ್ಲಿ ಇಂದು ವಿಚಾರಣೆ

ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ರಿಟ್ ಅರ್ಜಿ, ಸುಪ್ರೀಂನಲ್ಲಿ ಇಂದು ವಿಚಾರಣೆ

ನಯನಾ ರಾಜೀವ್
|

Updated on: Oct 05, 2026 | 11:01 AM

Share

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಎರಡು ರಿಟ್ ಅರ್ಜಿಗಳ ವಿಚಾರಣೆ ನಡೆಯಲಿದೆ. ಇತರ ಇಬ್ಬರು ಆಯುಕ್ತರ ಆಕ್ಷೇಪಣೆಗಳನ್ನು ಪರಿಗಣಿಸದೆ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಂಡ ಆರೋಪ ಅವರ ಮೇಲಿದೆ. ವೋಟರ್ಸ್ ಹೆಸರುಗಳ ಡಿಲೀಟ್ ತನಿಖೆ ಹಾಗೂ ಸಿಇಸಿ ಅಮಾನತಿಗೆ ಅರ್ಜಿಗಳು ಆಗ್ರಹಿಸಿವೆ.ಜ್ಞಾನೇಶ್ ಕುಮಾರ್ ಅವರು ಇತರ ಇಬ್ಬರು ಚುನಾವಣಾ ಆಯುಕ್ತರ ಆಕ್ಷೇಪಣೆಗಳನ್ನು ಪರಿಗಣಿಸದೆ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ನವದೆಹಲಿ, ಅಕ್ಟೋಬರ್ 05: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ವಿರುದ್ಧ ಸಲ್ಲಿಕೆಯಾಗಿದ್ದ ಎರಡು ರಿಟ್ ಅರ್ಜಿಗಳ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಸಿಜೆಐ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ, ಮತ್ತು ನ್ಯಾಯಮೂರ್ತಿ ವಿ.ಮೋಹನಾ ಅವರನ್ನೊಳಗೊಂಡ ಪೀಠವು ಈ ಅರ್ಜಿಗಳ ವಿಚಾರಣೆ ನಡೆಸಲಿದೆ.

ಜ್ಞಾನೇಶ್ ಕುಮಾರ್ ಅವರು ಇತರ ಇಬ್ಬರು ಚುನಾವಣಾ ಆಯುಕ್ತರ ಆಕ್ಷೇಪಣೆಗಳನ್ನು ಪರಿಗಣಿಸದೆ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಕಳೆದ ಹತ್ತು ತಿಂಗಳಲ್ಲಿ 14 ವಿವಾದಾತ್ಮಕ ಎಸ್‌ಐಆರ್ ನಿರ್ಧಾರಗಳನ್ನು ಜ್ಞಾನೇಶ್ ಕುಮಾರ್ ಏಕಪಕ್ಷೀಯವಾಗಿ ಕೈಗೊಂಡಿದ್ದು, ಇವುಗಳನ್ನು ರದ್ದುಪಡಿಸಬೇಕು ಎಂದು ಅರ್ಜಿಗಳಲ್ಲಿ ಕೋರಲಾಗಿದೆ. ಅಲ್ಲದೆ, ವೋಟರ್ಸ್ ಹೆಸರುಗಳನ್ನು ಡಿಲೀಟ್ ಮಾಡುವ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಬೇಕು, ಜ್ಞಾನೇಶ್ ಕುಮಾರ್ ಅವರನ್ನು ಅಮಾನತುಗೊಳಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ರಿಟ್ ಅರ್ಜಿಗಳು ಆಗ್ರಹಿಸಿವೆ.

ಇತರ ಚುನಾವಣಾ ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಅವರು ಸಲ್ಲಿಸಿದ್ದ 14 ಆಕ್ಷೇಪಣೆಗಳನ್ನು ಜ್ಞಾನೇಶ್ ಕುಮಾರ್ ನಿರ್ಲಕ್ಷಿಸಿದ್ದಾರೆ ಎಂಬುದು ಪ್ರಮುಖ ಆರೋಪವಾಗಿದೆ. ಈ ಕುರಿತು ಚುನಾವಣಾ ಆಯೋಗವು ಈ ಹಿಂದೆ ತನ್ನ ನಿರ್ಧಾರಗಳು ಒಮ್ಮತದಿಂದ ಕೂಡಿದ್ದವು ಎಂದು ಸ್ಪಷ್ಟಪಡಿಸಿತ್ತು. ಸುಪ್ರೀಂ ಕೋರ್ಟ್‌ನಲ್ಲಿ ಇಂದು ನಡೆಯುವ ವಿಚಾರಣೆ ಮಹತ್ವ ಪಡೆದಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More