‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 

Updated on: Apr 03, 2026 | 10:38 AM

ಸೂರಜ್ ಸಿಂಗ್ ಹಾಗೂ ರಾಶಿಕಾ ಕೆಮಿಸ್ಟ್ರಿ ಹೇಗಿತ್ತು ಎಂಬುದನ್ನು ಮತ್ತೆ ಹೊಸದಾಗಿ ಹೇಳಬೇಕಿಲ್ಲ. ಈಗ ರಾಶಿಕಾಗಿಂತ ಮತ್ತೊಬ್ಬರು ಸೂರಜ್​​ ಅವರಿಗೆ ಇಷ್ಟ ಆಗಿದ್ದಾರೆ. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. 

ರಾಶಿಕಾ ಶೆಟ್ಟಿ ಹಾಗೂ ಸೂರಜ್ ಸಿಂಗ್ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಒಳ್ಳೆಯ ಬಾಂಧವ್ಯ ಬೆಳೆಸಿಕೊಂಡಿದ್ದರು. ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕವೂ ಇಬ್ಬರ ಮಧ್ಯೆ ಫ್ರೆಂಡ್​​ಶಿಪ್ ಬೆಳೆದಿದೆ. ಈಗ ಸೂರಜ್ ಅವರು ‘ಪವಿತ್ರ ಬಂಧನ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈಗ ಸೂರಜ್ ಸಿಂಗ್ ಸಿಂಗ್ ಅವರು ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್​​’ಗೆ ಬಂದಿದ್ದಾರೆ. ಈ ವೇಳೆ ರಾಶಿಕಾ-ಪವಿತ್ರಾ ಮಧ್ಯೆ ಯಾರು ಇಷ್ಟ ಎಂದು ಕೇಳಿದಾಗ ಪವಿತ್ರಾ ಹೆಸರನ್ನು ಸೂರಜ್ ತೆಗೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More