ಆರೋಪಿ ದರ್ಶನ್​ ಕೇಳಿದ್ದ ಸರ್ಜಿಕಲ್​ ಚೇರ್​ ತಂದುಕೊಟ್ಟ ಬಳ್ಳಾರಿ ಜೈಲಿನ ಅಧಿಕಾರಿಗಳು

Updated on: Sep 02, 2024 | 4:54 PM

ಬೆನ್ನು ನೋವು ಇರುವ ಕಾರಣದಿಂದ ಕುಳಿತುಕೊಳ್ಳುವುದು ದರ್ಶನ್​ಗೆ ಕಷ್ಟ ಆಗುತ್ತಿದೆ. ಹಾಗಾಗಿ ಬಳ್ಳಾರಿ ಜೈಲಿನಲ್ಲಿ ಸರ್ಜಿಕಲ್​ ಚೇರ್​ ಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದರು. ವೈದ್ಯರ ವರದಿಯ ಪರಿಶೀಲನೆ ಬಳಿಕ ಅನುಮತಿ ಸಿಕ್ಕಿದ್ದರಿಂದ ಬಳ್ಳಾರಿ ಜೈಲಿನ ಅಧಿಕಾರಿಗಳು ದರ್ಶನ್​ಗೆ ಇಂದು (ಸೆಪ್ಟೆಂಬರ್​ 2) ಸರ್ಜಿಕಲ್​ ಚೇರ್​ ನೀಡಿದ್ದಾರೆ.

ಪರಪ್ಪನ ಅಗ್ರಹಾರದಲ್ಲಿ ದರ್ಶನ್​ ರಾಜಾತಿಥ್ಯ ಪಡೆದಿದ್ದರಿಂದ ಬಳ್ಳಾರಿ ಜೈಲಿಗೆ ಶಿಫ್ಟ್​ ಮಾಡಲಾಯಿತು. ಬಳ್ಳಾರಿ ಜೈಲಿನಲ್ಲಿ ಸರ್ಜಿಕಲ್​ ಚೇರ್​ಗಾಗಿಯೂ ದರ್ಶನ್​ ಅಂಗಲಾಚುವಂತಾಗಿದೆ. ವೈದ್ಯರು ನೀಡಿದ ಎರಡು ಪ್ರತ್ಯೇಕ ವರದಿಗಳನ್ನು ಪರಿಶೀಲನೆ ಮಾಡಲಾಗಿದೆ. ಆ ಬಳಿಕವೇ ನಟ ದರ್ಶನ್​ಗೆ ಸರ್ಜಿಕಲ್​ ಚೇರ್​ ನೀಡುವ ತೀರ್ಮಾನಕ್ಕೆ ಬರಲಾಗಿದೆ. ಇಂದು (ಸೆ.2) ಬಳ್ಳಾರಿ ಜೈಲಿನ ಅಧಿಕಾರಿಗಳು ಸರ್ಜಿಕಲ್​ ಚೇರ್​ ತರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More