IPL 2025: ವೇಗ ಶರವೇಗ; ಐಪಿಎಲ್‌ನಲ್ಲಿ ದಾಖಲೆ ಬರೆದ ಸೂರ್ಯಕುಮಾರ್
SuryaKumar Yadav's Record-Breaking IPL 2025 Innings: ಐಪಿಎಲ್ 2025ರ 45ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 215 ರನ್ ಗಳಿಸಿತು. ಸೂರ್ಯಕುಮಾರ್ ಯಾದವ್ 28 ಎಸೆತಗಳಲ್ಲಿ 54 ರನ್ ಗಳಿಸಿ ಅದ್ಭುತ ಅರ್ಧಶತಕ ಸಿಡಿಸಿದರು. ಇದರಿಂದ ಅವರು ಐಪಿಎಲ್‌ನಲ್ಲಿ ಅತಿ ವೇಗವಾಗಿ 4000 ರನ್ ಗಳಿಸಿದ ಮೊದಲ ಭಾರತೀಯ ಎಂಬ ದಾಖಲೆ ಬರೆದರು.
ಐಪಿಎಲ್ 2025 ರ 4ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ಜೈಂಟ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡ 215 ರನ್ ಕಲೆಹಾಕಿದೆ. ತಂಡದ ಪರ ರಯಾನ್ ರಿಕಲ್ಟನ್ ಹಾಗೂ ಸೂರ್ಯಕುಮಾರ್ ಯಾದವ್ ಅಮೋಘ ಅರ್ಧಶತಕ ಸಿಡಿಸಿದರು. ಈ ಮೂಲಕ ಸೂರ್ಯ ಐಪಿಎಲ್‌ನಲ್ಲಿ ದೊಡ್ಡ ದಾಖಲೆಯನ್ನು ನಿರ್ಮಿಸಿದ್ದಾರೆ. ತಮ್ಮ ಇನ್ನಿಂಗ್ಸ್ನಲ್ಲಿ 28 ಎಸೆತಗಳನ್ನು ಎದುರಿಸಿದ ಸೂರ್ಯ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 54 ರನ್ ಕಲೆಹಾಕಿದರು. ಈ ಮೂಲಕ ಸೂರ್ಯಕುಮಾರ್ ಯಾದವ್ ಐಪಿಎಲ್‌ನಲ್ಲಿ ಅತಿ ವೇಗವಾಗಿ 4000 ರನ್‌ಗಳನ್ನು ಪೂರ್ಣಗೊಳಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
Latest Videos