ನನ್ನ ಇಲಾಖೆಯಿಂದ ಅನುದಾನ ಬಿಡುಗಡೆಯಾಗಿಲ್ಲದಿರುವುದನ್ನು ಸುರ್ಜೇವಾಲಾ ಚರ್ಚಿಸಿದರು: ಸತೀಶ್ ಜಾರಕಿಹೊಳಿ

ಅರುಣ್​ ಕುಮಾರ್​ ಬೆಳ್ಳಿ

Updated on: Jul 15, 2025 | 1:31 PM

ಸತೀಶ್ ಜಾರಕಿಹೊಳಿ ಒಬ್ಬ ಸೀನಿಯರ್ ಕಾಂಗ್ರೆಸ್ ನಾಯಕ ಮತ್ತು ಸಚಿವನಾಗಿದ್ದಾಗ್ಯೂ ಸುರ್ಜೇವಾಲಾ ಕರೆದು ಮಾತಾಡುವ ಅವಶ್ಯಕತೆಯಿತ್ತೇ ಎಂದು ಕೇಳಿದಾಗ ಗೊಂದಲಕ್ಕೆ ಬಿದ್ದಂತೆ ಕಂಡ ಜಾರಕಿಹೊಳಿ ನಂತರ ಸಾವರಿಸಿಕೊಂಡು, ಅದರಲ್ಲಿ ತಪ್ಪೇನಿಲ್ಲ, ಇಲಾಖೆಯಲ್ಲಿ ಅಥವಾ ತನ್ನಿಂದ ತಪ್ಪುಗಳಾಗಿದ್ದರೆ ತಿದ್ದಿಕೊಳ್ಳುವ ಅವಕಾಶವಿದೆ, ಅವುಗಳನ್ನು ಸರಿಮಾಡಿಕೊಳ್ಳುತ್ತೇವೆ ಎಂದು ಹೇಳಿದರು.

ಬೆಂಗಳೂರು, ಜುಲೈ 15: ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ  (Satish Jarkiholi) ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೇವಾಲಾರನ್ನು ಭೇಟಿಯಾದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ನಿರ್ದಿಷ್ಟವಾಗಿ ಅವರೇನೂ ತನಗೆ ಹೇಳಲಿಲ್ಲ, ತಮ್ಮ ಇಲಾಖೆಯಿಂದ ಏನೆಲ್ಲ ಕೆಲಸಗಳಾಗಿವೆ ಅಂತ ಅವರಿಗೆ ಹೇಳಿದ್ದೇನೆ, ಕ್ಷೇತ್ರಾವಾರು ಅನುದಾನಗಳನ್ನು ಬಿಡುಗಡೆ ಮಾಡಿರುವ ಬಗ್ಗೆಯೂ ಅವರ ಗಮನಕ್ಕೆ ತರಲಾಗಿದೆ ಎಂದು ಹೇಳಿದರು. ಕೆಲ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಕೆಲಸವಾಗಿಲ್ಲ, ಅನುದಾನ ಬಿಡುಗಡೆ ಮಾಡಿಲ್ಲ ಅಂತ ಸುರ್ಜೇವಾಲಾ ಅವರಿಗೆ ಹೇಳಿದ್ದಾರೆ, ಅದರ ಬಗ್ಗೆ ಚರ್ಚೆಯಾಯಿತು, ಅವರೊಂದಿಗೆ ತಾನು ಮೀಟಿಂಗ್ ಮಾಡೋದಾಗಿ ಹೇಳಿದ್ದೇನೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಹೇಳಿಕೆ ಮತ್ತು ನಾವು ಖರ್ಗೆಯವರನ್ನು ಭೇಟಿಯಾಗಿರುವ ನಡುವೆ ಸಂಬಂಧವಿಲ್ಲ: ಸತೀಶ್ ಜಾರಕಿಹೊಳಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.