Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA T20I: ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ ನೋಡಿ

IND vs SA T20I: ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ ನೋಡಿ

Vinay Bhat
|

Updated on: Dec 10, 2023 | 12:32 PM

India vs South Africa T20I Series Trophy Photoshoot: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟ್ರೋಫಿ ಅನಾವರಣ ಸಮಾರಂಭದ ಕಿರು ವಿಡಿಯೋವನ್ನು ಬಿಡುಗಡೆ ಮಾಡಿದೆ. ಇಬ್ಬರೂ ನಾಯಕರು ಕೈ-ಕೈ ಜೋಡಿಸಿ ರಿಕ್ಷಾ ಸವಾರಿ ಮಾಡಿ ಟ್ರೋಫಿ ಜೊತೆ ಫೋಟೋಕ್ಕೆ ಪೋಸ್ ಕೊಟ್ಟಿದ್ದಾರೆ.

ಭಾರತ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾ (India vs South Africa) ಪ್ರವಾಸದಲ್ಲಿದ್ದು, ಇಂದು ಸೌತ್ ಆಫ್ರಿಕಾ ವಿರುದ್ಧ ಡರ್ಬನ್‌ನಲ್ಲಿ ಮೊದಲ ಟಿ20 ಪಂದ್ಯವನ್ನು ಆಡಲಿದೆ. ಇದಕ್ಕೂ ಮುನ್ನ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ದಕ್ಷಿಣ ಆಫ್ರಿಕಾದ ನಾಯಕ ಏಡೆನ್ ಮಾರ್ಕ್ರಾಮ್ ಶನಿವಾರ ಡರ್ಬನ್‌ನಲ್ಲಿ ಟಿ20 ಟ್ರೋಫಿಯನ್ನು ಅನಾವರಣಗೊಳಿಸಿದರು. ಇದೇ ವೇಳೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟ್ರೋಫಿ ಅನಾವರಣ ಸಮಾರಂಭದ ಕಿರು ವಿಡಿಯೋವನ್ನು ಬಿಡುಗಡೆ ಮಾಡಿದೆ. ಇಬ್ಬರೂ ನಾಯಕರು ಕೈ-ಕೈ ಜೋಡಿಸಿ ರಿಕ್ಷಾ ಸವಾರಿ ಮಾಡಿ ಟ್ರೋಫಿ ಜೊತೆ ಫೋಟೋಕ್ಕೆ ಪೋಸ್ ಕೊಟ್ಟಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ