AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರ ನಡುವೆ 'ಒಳ'ಜಗಳ

VIDEO: ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರ ನಡುವೆ ‘ಒಳ’ಜಗಳ

ಝಾಹಿರ್ ಯೂಸುಫ್
|

Updated on: Feb 16, 2026 | 10:53 AM

Share

Suryakumar yadav and Kuldeep yadav fight: ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಭಾರತ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 175 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡ ಗಳಿಸಿದ್ದು ಕೇವಲ 114 ರನ್​​ ಮಾತ್ರ. ಈ ಮೂಲಕ ಟೀಮ್ ಇಂಡಿಯಾ 61 ರನ್​​ಗಳ ಅಮೋಘ ಗೆಲುವು ದಾಖಲಿಸಿದೆ.

ಪಾಕಿಸ್ತಾನ್ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡವು ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ ಎಲ್ಲವೂ ಸರಿಯಿಲ್ಲವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇದಕ್ಕೆ ಕಾರಣವಾಗಿದ್ದು ಮೈದಾನದಲ್ಲಿನ ಭಾರತೀಯ ಆಟಗಾರರ ‘ಒಳ’ಜಗಳ.

ಪಾಕ್ ವಿರುದ್ಧದ ಪಂದ್ಯದ ಬಳಿಕ ಹಾರ್ದಿಕ್ ಪಾಂಡ್ಯ ಅವರು ಮೈದಾನದಲ್ಲೇ ಕುಲದೀಪ್ ಯಾದವ್ ಅವರೊಂದಿಗೆ ಮಾತಿನ ಚಕಮಕಿ ನಡೆಸುತ್ತಿರುವುದು ಕಂಡು ಬಂತು. ಈ ವೇಳೆ ಸಹ ಆಟಗಾರರು ಮಧ್ಯ ಪ್ರವೇಶಿಸುವ ಮೂಲಕ ಪರಿಸ್ಥಿತಿ ತಿಳಿಗೊಳಿಸಿದರು.

ಇದರ ಬೆನ್ನಲ್ಲೇ ಪರಸ್ಪರ ಹಸ್ತಲಾಘವ ಮಾಡುವ ಸಂದರ್ಭದಲ್ಲಿ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಕುಲ್ದೀಪ್ ಯಾದವ್ ನಡುವೆ ಎಲ್ಲವೂ ಸರಿಯಿಲ್ಲ ಎಂಬುದು ಬಹಿರಂಗವಾಗಿದೆ. ಇಬ್ಬರು ಪರಸ್ಪರ ಅಪ್ಪಿಕೊಂಡರೂ ಕುಲ್ದೀಪ್ ಯಾದವ್ ನಾಯಕನ ಮುಖ ನೋಡಿರಲಿಲ್ಲ.

ಅತ್ತ ಸೂರ್ಯಕುಮಾರ್ ಯಾದವ್ ಕೂಡ ಕುಲ್ದೀಪ್ ಯಾದವ್​ರನ್ನು ತಳ್ಳುವ ಮೂಲಕ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಕಾಣಬಹುದು. ಇದೀಗ ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇನ್ನು ಈ ಪಂದ್ಯದ 18ನೇ ಓವರ್​ನಲ್ಲಿ ಕುಲ್ದೀಪ್ ಯಾದವ್ ಸುಲಭ ಕ್ಯಾಚ್ ಕೈಚೆಲ್ಲಿದ್ದರು. ಇದೇ ಕಾರಣಕ್ಕೆ ಹಾರ್ದಿಕ್ ಪಾಂಡ್ಯ ಕುಲ್ದೀಪ್ ವಿರುದ್ಧ ಆಕ್ರೋಶ ಹೊರಹಾಕಿರುವ ಸಾಧ್ಯತೆಯಿದೆ. ಆದರೆ ಸೂರ್ಯಕುಮಾರ್ ಯಾದವ್ ಹಾಗೂ ಕುಲ್ದೀಪ್ ನಡುವಣ ಒಳಜಗಳಕ್ಕೆ ಕಾರಣವೇನು ಎಂಬುದು ಇನ್ನಷ್ಟೇ ಬಹಿರಂಗವಾಗಬೇಕಿದೆ.