IND vs AUS 4th T20I: ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್‌ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು
Team India Reached Raipur: ಶಹೀದ್ ವೀರ್ ನಾರಾಯಣ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟಿ20 ಪಂದ್ಯಕ್ಕಾಗಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ಆಟಗಾರರು ರಾಯ್‌ಪುರ ತಲುಪಿದ್ದಾರೆ. ಶುಕ್ರವಾರ ನಾಲ್ಕನೇ ಟಿ20 ಪಂದ್ಯ ಆಯೋಜಿಸಲಾಗಿದೆ.
ಶುಕ್ರವಾರ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟಿ20Iಗೆ ಮುಂಚಿತವಾಗಿ ಟೀಮ್ ಇಂಡಿಯಾ (Team India) ಆಟಗಾರರು ರಾಯ್‌ಪುರವನ್ನು ತಲುಪಿದ್ದಾರೆ. ಭಾರತೀಯ ಪಡೆ ಬುಧವಾರ ಸಂಜೆ ರಾಯ್‌ಪುರ ವಿಮಾನ ನಿಲ್ದಾಣದಿಂದ ಹೊರನಡೆಯುತ್ತಿರುವುದು ಕಂಡುಬಂದಿದೆ. ಸ್ಟ್ಯಾಂಡ್-ಇನ್ ಕೋಚ್ ವಿವಿಎಸ್ ಲಕ್ಷ್ಮಣ್ ಅವರು ಮೊದಲು ವಿಮಾನ ನಿಲ್ದಾಣದಿಂದ ಬಂದರು. ನಂತರ ಭಾರತೀಯ ಆಟಗಾರರು ಆಗಮಿಸಿದರು. ರಾಯ್‌ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ 4ನೇ ಟಿ20 ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ. ಸದ್ಯ 5 ಪಂದ್ಯಗಳ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡ 2-1 ಮುನ್ನಡೆ ಸಾಧಿಸಿದೆ. ಮೊದಲೆರಡು ಪಂದ್ಯಗಳಲ್ಲಿ ಸೋತ ಆಸ್ಟ್ರೇಲಿಯಾ ಮೂರನೇ ಟಿ20ಯಲ್ಲಿ ಅದ್ಭುತ ರೀತಿಯಲ್ಲಿ ಪುಟಿದೆದ್ದಿತು. ಗ್ಲೆನ್ ಮ್ಯಾಕ್ಸ್‌ವೆಲ್ ಅಜೇಯ ಶತಕ ಗಳಿಸಿ ಆಸೀಸ್ 223 ರನ್‌ಗಳ ಗುರಿಯನ್ನು ಬೆನ್ನಟ್ಟಿತು. ಹೀಗಾಗಿ ನಾಲ್ಕನೇ ಪಂದ್ಯ ರೋಚಕತೆ ಸೃಷ್ಟಿಸಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos