IND vs AUS 2nd T20I: ತಿರುವನಂತಪುರಂ ತಲುಪಿವ ಟೀಮ್ ಇಂಡಿಯಾ ಆಟಗಾರರು: 2ನೇ ಟಿ20 ಯಾವಾಗ?
Team India Reached Thiruvananthapuram: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ರೋಚಕ ಗೆಲುವು ಸಾಧಿಸಿರುವ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡ ಇದೀಗ ಎರಡನೇ ಟಿ20 ಪಂದ್ಯಕ್ಕಾಗಿ ತಿರುವನಂತಪುರಂಗೆ ತಲುಪಿದೆ. ಎರಡನೇ ಟಿ20 ಪಂದ್ಯ ಭಾನುವಾರ (ನವೆಂಬರ್ 26) ನಡೆಯಲಿದೆ.
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾ (Team India) ಆಟಗಾರರು ವಿಶಾಖಪಟ್ಟಣದಿಂದ ಹೊರಟು ತಿರುವನಂತಪುರಂಗೆ ತಲುಪಿದ್ದಾರೆ. ತಮ್ಮ ನೂತನ ನಾಯಕ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ಮೊದಲ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿತು. ಈ ಗೆಲುವಿನ ಮೂಲಕ ಸೂರ್ಯ ಪಡೆ 5 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಎರಡನೇ ಟಿ20 ಪಂದ್ಯ ಭಾನುವಾರ (ನವೆಂಬರ್ 26) ನಡೆಯಲಿದೆ. ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಇದಕ್ಕಾಗಿ ಎಲ್ಲ ಆಟಗಾರರು ತಿರುವನಂತಪುರಂಗೆ ತಲುಪಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ವಿಡಿಯೋ ಹಂಚಿಕೊಂಡಿದೆ. ಯುವ ಆಟಗಾರರಿಂದ ಕೂಡಿರುವ ಭಾರತ ದ್ವಿತೀಯ ಪಂದ್ಯದಲ್ಲಿ ಯಾವರೀತಿ ಪ್ರದರ್ಶನ ತೋರುತ್ತದೆ ಎಂಬುದು ನೋಡಬೇಕಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos