AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಜ್ಞಾನಭಾರತಿ ಬಳಿ ಸ್ಫೋಟಕ ಮಾದರಿಯ ಅನುಮಾನಾಸ್ಪದ ವಸ್ತು ಪತ್ತೆ

ಬೆಂಗಳೂರಿನ ಜ್ಞಾನಭಾರತಿ ಬಳಿ ಸ್ಫೋಟಕ ಮಾದರಿಯ ಅನುಮಾನಾಸ್ಪದ ವಸ್ತು ಪತ್ತೆ

ರಾಚಪ್ಪಾಜಿ ನಾಯ್ಕ್
| Edited By: |

Updated on: Oct 31, 2026 | 1:02 PM

Share

ಬೆಂಗಳೂರಿನ ಜ್ಞಾನಭಾರತಿ ವ್ಯಾಪ್ತಿಯ ಸೋಣೇನಹಳ್ಳಿ ಸರ್ಕಲ್ ಬಳಿಯ ಖಾಲಿ ಜಾಗದಲ್ಲಿ ಸ್ಫೋಟಕ ಮಾದರಿಯ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ. ಇದು ಡೈನಮೈಟ್ ಎಂದು ಪೊಲೀಸರು ಶಂಕಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಯಾರು ಈ ವಸ್ತುವನ್ನಿಟ್ಟರು ಮತ್ತು ಇದರ ಉದ್ದೇಶವೇನು ಎಂಬುದರ ಬಗ್ಗೆ ತನಿಖೆ ಚುರುಕುಗೊಳಿಸಲಾಗಿದೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ಬೆಂಗಳೂರು, ಅಕ್ಟೋಬರ್​​ 31: ಜ್ಞಾನಭಾರತಿ ವ್ಯಾಪ್ತಿಯ ಸೋಣೇನಹಳ್ಳಿ ಸರ್ಕಲ್ ಸಮೀಪದ ಖಾಲಿ ಜಾಗದಲ್ಲಿ ಸ್ಫೋಟಕ ಮಾದರಿಯ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ. ಈ ವಸ್ತು ಡೈನಮೈಟ್ ಆಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ, ಜ್ಞಾನಭಾರತಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸ್ಫೋಟಕ ವಸ್ತುವಿನ ಮೂಲವನ್ನು ಪತ್ತೆಹಚ್ಚಲು ಮತ್ತು ಇದನ್ನು ಇಲ್ಲಿ ಯಾರು ಇರಿಸಿದ್ದಾರೆ ಎಂಬ ಬಗ್ಗೆ ತೀವ್ರ ತನಿಖೆ ಕೈಗೊಳ್ಳಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More