ಬೆಂಗಳೂರಿನ ಜ್ಞಾನಭಾರತಿ ಬಳಿ ಸ್ಫೋಟಕ ಮಾದರಿಯ ಅನುಮಾನಾಸ್ಪದ ವಸ್ತು ಪತ್ತೆ
ಬೆಂಗಳೂರಿನ ಜ್ಞಾನಭಾರತಿ ವ್ಯಾಪ್ತಿಯ ಸೋಣೇನಹಳ್ಳಿ ಸರ್ಕಲ್ ಬಳಿಯ ಖಾಲಿ ಜಾಗದಲ್ಲಿ ಸ್ಫೋಟಕ ಮಾದರಿಯ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ. ಇದು ಡೈನಮೈಟ್ ಎಂದು ಪೊಲೀಸರು ಶಂಕಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಯಾರು ಈ ವಸ್ತುವನ್ನಿಟ್ಟರು ಮತ್ತು ಇದರ ಉದ್ದೇಶವೇನು ಎಂಬುದರ ಬಗ್ಗೆ ತನಿಖೆ ಚುರುಕುಗೊಳಿಸಲಾಗಿದೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.
ಬೆಂಗಳೂರು, ಅಕ್ಟೋಬರ್ 31: ಜ್ಞಾನಭಾರತಿ ವ್ಯಾಪ್ತಿಯ ಸೋಣೇನಹಳ್ಳಿ ಸರ್ಕಲ್ ಸಮೀಪದ ಖಾಲಿ ಜಾಗದಲ್ಲಿ ಸ್ಫೋಟಕ ಮಾದರಿಯ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ. ಈ ವಸ್ತು ಡೈನಮೈಟ್ ಆಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ, ಜ್ಞಾನಭಾರತಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸ್ಫೋಟಕ ವಸ್ತುವಿನ ಮೂಲವನ್ನು ಪತ್ತೆಹಚ್ಚಲು ಮತ್ತು ಇದನ್ನು ಇಲ್ಲಿ ಯಾರು ಇರಿಸಿದ್ದಾರೆ ಎಂಬ ಬಗ್ಗೆ ತೀವ್ರ ತನಿಖೆ ಕೈಗೊಳ್ಳಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
