ದಾವಣಗೆರೆ ಗೊಂದಲ ಸರಿಪಡಿಸದಿದ್ರೆ ‌ಮತ್ತೆ ಅನಾಹುತಗಳಾಗುತ್ತೆ: ಕೈಗೆ ಜಬ್ಬಾರ್ ಎಚ್ಚರಿಕೆ

Edited By:

Updated on: May 06, 2026 | 4:38 PM

ಸಾಕಷ್ಟು ಗೊಂದಲ, ಸವಾಲುಗಳ ನಡುವೆಯೂ ದಾವಣಗೆರೆ ದಕ್ಷಿಣ (Davanagere South) ಕ್ಷೇತ್ರವನ್ನು ಮರಳಿ ತೆಕ್ಕೆಗೆ ಪಡೆಯುವಲ್ಲಿ ಆಡಳಿತಾರೂಢ ಕಾಂಗ್ರೆಸ್​​ (Congress) ಯಶಸ್ವಿಯಾಗಿದೆ. ಆದರೂ ಅಸಮಾಧಾನ ಶಮನವಾಗುವ ಲಕ್ಷಣಗಳು ಕಾಣುತ್ತಿಲ್ಲ. ಉಪಚುನಾವಣೆ ಟಿಕೆಟ್ ಸಂಬಂಧ ಕಾಂಗ್ರೆಸ್ ನಲ್ಲಿ ಸಾಕಷ್ಟು ಹೈಡ್ರಾಮಾಗಳು ನಡೆದಿದ್ದು, ಕೊನೆಗೆ ಅಲ್ಪಸಂಖ್ಯಾತ ನಾಯಕರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗಿದೆ. ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನ ಪಕ್ಷದಿಂದ ಅಮಾನತು ಮಾಡಲಾಗಿದ್ದು, ಇದೀಗ ಅದನ್ನು ವಾಪಸ್ ಪಡೆಯುವಂತೆ ಕೆಲ ನಾಯಕರು ಸಲಹೆ ನೀಡಿದ್ದಾರೆ. 

ಬೆಂಗಳೂರು, (ಮೇ 06): ಸಾಕಷ್ಟು ಗೊಂದಲ, ಸವಾಲುಗಳ ನಡುವೆಯೂ ದಾವಣಗೆರೆ ದಕ್ಷಿಣ (Davanagere South) ಕ್ಷೇತ್ರವನ್ನು ಮರಳಿ ತೆಕ್ಕೆಗೆ ಪಡೆಯುವಲ್ಲಿ ಆಡಳಿತಾರೂಢ ಕಾಂಗ್ರೆಸ್​​ (Congress) ಯಶಸ್ವಿಯಾಗಿದೆ. ಆದರೂ ಅಸಮಾಧಾನ ಶಮನವಾಗುವ ಲಕ್ಷಣಗಳು ಕಾಣುತ್ತಿಲ್ಲ. ಉಪಚುನಾವಣೆ ಟಿಕೆಟ್ ಸಂಬಂಧ ಕಾಂಗ್ರೆಸ್ ನಲ್ಲಿ ಸಾಕಷ್ಟು ಹೈಡ್ರಾಮಾಗಳು ನಡೆದಿದ್ದು, ಕೊನೆಗೆ ಅಲ್ಪಸಂಖ್ಯಾತ ನಾಯಕರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗಿದೆ. ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನ ಪಕ್ಷದಿಂದ ಅಮಾನತು ಮಾಡಲಾಗಿದ್ದು, ಇದೀಗ ಅದನ್ನು ವಾಪಸ್ ಪಡೆಯುವಂತೆ ಕೆಲ ನಾಯಕರು ಸಲಹೆ ನೀಡಿದ್ದಾರೆ.

ಈ ಸಂಬಂಧ ಖುದ್ದು ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಪ್ರತಿಕ್ರಿಯಿಸಿದ್ದು, ಎಸ್ ಡಿ ಪಿಐ ಪಡೆದಿದ್ದು 100% ಕಾಂಗ್ರೆಸ್ ಮತಗಳು.ಶಾಮನೂರು ಇದ್ದಾಗಲೇ ನಾವು ಟಿಕೆಟ್ ಕೇಳಿದ್ದೆವು. ಅವರು ಇಲ್ಲದಾಗೂ ಟಿಕೆಟ್ ಕೇಳಿದ್ದೇವೆ. ಅದಕ್ಕೆ ಇಷ್ಟೆಲ್ಲಾ ಆಯ್ತು. ಮುಂದೆ ಎಲ್ಲ ಸರಿ ಹೋಗಬಹುದು. ಸರಿ ಮಾಡಲು ಅವಕಾಶ ಇದೆ. ತಪ್ಪು ಸರಿಪಡಿಸದೆ ಹೋದ್ರೆ ‌ಮತ್ತೆ ಅನಾಹುತಗಳಾಗುತ್ತೆ ಎಂದು ಕಾಂಗ್ರೆಸ್​​​​​​ಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ನೋಡಿ: ದಾವಣಗೆರೆ ದಕ್ಷಿಣ ಉಪ ಚುನಾವಣೆ ಗೆದ್ದರೂ ಕಾಂಗ್ರೆಸ್​​ಗೆ ತಪ್ಪದ ಚಿಂತೆ: ಕಾರಣ ಇಲ್ಲಿದೆ

Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More