ಪಿಎಸ್ಐ ಅನುಮಾನಾಸ್ಪದ ಸಾವು: ಸಿದ್ದರಾಮಯ್ಯ ವಿರುದ್ಧ ರೊಚ್ಚಿಗೆದ್ದ ಶಾಸಕ ಯತ್ನಾಳ್
ಸಿದ್ದರಾಮಯ್ಯ ಸರ್ಕಾರದಲ್ಲೇ ದಲಿತರ ಹತ್ಯೆಗಳು ಹೆಚ್ಚಾಗುತ್ತಿದೆ. ಪಿಎಸ್ಐ ಸಾವಿಗೆ ಕಾಂಗ್ರೆಸ್ ಶಾಸಕರ ಭ್ರಷ್ಟಾಚಾರವೇ ಕಾರಣ. ಪೊಲೀಸ್ ಅಧಿಕಾರಿಗಳೇ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ ಎಂದು ಸಿದ್ದರಾಮಯ್ಯ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ಮಾಡಿದ್ದಾರೆ.
ವಿಜಯಪುರ, ಆಗಸ್ಟ್ 3: ಯಾದಗಿರಿ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣ ವಿಚಾರವಾಗಿ ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಿದ್ದರಾಮಯ್ಯ (Siddaramaiah) ಸರ್ಕಾರದಲ್ಲೇ ದಲಿತರ ಹತ್ಯೆಗಳು ಹೆಚ್ಚಾಗುತ್ತಿದೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಅಧಿಕಾರಿ ಆತ್ಮಹತ್ಯೆಗೆ ಶರಣಾದ. ಈಗ ಪಿಎಸ್ಐ ಪರಶುರಾಮ ಮೃತಪಟ್ಟಿದ್ದಾನೆ. ಪಿಎಸ್ಐ ಸಾವಿಗೆ ಕಾಂಗ್ರೆಸ್ ಶಾಸಕರ ಭ್ರಷ್ಟಾಚಾರವೇ ಕಾರಣ. ಪೊಲೀಸ್ ಅಧಿಕಾರಿಗಳೇ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಮಾತ್ರ ರಾಜೀನಾಮೆ ನೀಡಿದರೆ ಸಾಲದು. ಸಿಎಂ ರಾಜೀನಾಮೆ ಕೊಟ್ಟರೆ ಡಿಕೆ ಶಿವಕುಮಾರ್ ಸಿಎಂ ಆಗಲು ಅನುಕೂಲವಾಗುತ್ತೆ. ಹಾಗಾಗಿ ವಿಧಾನಸಭೆಯನ್ನು ವಿಸರ್ಜನೆ ಮಾಡಬೇಕು. ಮತ್ತೆ ಚುನಾವಣೆಗೆ ಹೋಗೋಣ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.