ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​ಕೇಸ್​

Updated on: Aug 06, 2025 | 5:28 PM

ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲ ಕಾಲ ಸೂಟ್​ ಕೇಸ್ ಆತಂಕದ ವಾತವರಣ ಸೃಷ್ಟಿಸಿದೆ. ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಅಪರಿಚಿತ ವ್ಯಕ್ತಿಯ ಸೂಟ್ ಕೇಸ್ ಪತ್ತೆಯಾಗಿದ್ದು, ಇದು ಕೆಲ ಕಾಲ ಆತಂಕ ಸೃಷ್ಟಿಸಿತ್ತು. ಕೂಡಲೇ ಸ್ಥಳಕ್ಕೆ ಮಹದೇವಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಹರಿಯಾಣ ಮೂಲದ ವ್ಯಕ್ತಿಗೆ ಸೇರಿದ ಸೂಟ್ ಕೇಸ್ ಎಂಬುದು ಪತ್ತೆಯಾಗಿದೆ.

ಬೆಂಗಳೂರು, (ಆಗಸ್ಟ್ 06): ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲ ಕಾಲ ಸೂಟ್​ ಕೇಸ್ ಆತಂಕದ ವಾತವರಣ ಸೃಷ್ಟಿಸಿದೆ. ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಅಪರಿಚಿತ ವ್ಯಕ್ತಿಯ ಸೂಟ್ ಕೇಸ್ ಪತ್ತೆಯಾಗಿದ್ದು, ಇದು ಕೆಲ ಕಾಲ ಆತಂಕ ಸೃಷ್ಟಿಸಿತ್ತು. ಕೂಡಲೇ ಸ್ಥಳಕ್ಕೆ ಮಹದೇವಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಹರಿಯಾಣ ಮೂಲದ ವ್ಯಕ್ತಿಗೆ ಸೇರಿದ ಸೂಟ್ ಕೇಸ್ ಎಂಬುದು ಪತ್ತೆಯಾಗಿದೆ. ತ‌ನ್ನದೇ ಸೂಟ್ ಕೇಸ್ ಎಂದು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು ಆತಂಕ ಸೃಷ್ಟಿಸಿದ್ದ ಸೂಟ್ ಕೇಸ್ ಟೂಲ್ ಕಿಟ್ ಎಂಬುವುದು ತಿಳಿದುಬಂದಿದೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More