AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ ಮೀಸಲಾತಿ ಹೋರಾಟ, ಕೋಟೆಯಂತಾದ ಸುವರ್ಣ ಸೌಧ, ಎಲ್ಲೆಡೆ ಪೊಲೀಸ್ ಸರ್ಪಗಾವಲು

ಪಂಚಮಸಾಲಿ ಮೀಸಲಾತಿ ಹೋರಾಟ, ಕೋಟೆಯಂತಾದ ಸುವರ್ಣ ಸೌಧ, ಎಲ್ಲೆಡೆ ಪೊಲೀಸ್ ಸರ್ಪಗಾವಲು

ಅರುಣ್​ ಕುಮಾರ್​ ಬೆಳ್ಳಿ
|

Updated on: Dec 10, 2024 | 6:23 PM

Share

ವಿಧಿವಶರಾಗಿರುವಅ ಎಸ್ ಎಂ ಕೃಷ್ಣ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಬೆಂಗಳೂರಿಗೆ ತೆರಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತಾಡಿದ ಅವರು ಪಂಚಮಸಾಲಿ ಮುಖಂಡರ ಪೈಕಿ ಹತ್ತು ಜನರನ್ನು ಚರ್ಚೆಗೆ ಕರೆಸಲಾಗಿತ್ತು, ಆದರೆ ಅವರು ಬರಲಿಲ್ಲ ಎಂದರು. ಆದರೆ ಪ್ರತಿಭಟನೆಕಾರರು ಖುದ್ದು ಸಿಎಂ ಬಂದು ಮನವಿ ಸ್ವೀಕರಿಸುವುದಾಗಿ ಹೇಳಿದ್ದರು ಎನ್ನುತ್ತಿದ್ದಾರೆ.

ಬೆಳಗಾವಿ: ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯವು 2ಎ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟ ಉಗ್ರರೂಪ ಪಡೆದುಕೊಂಡಿದೆ ಮತ್ತು ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸಿದ್ದರಿಂದ ಹಲವಾರು ಜನರಿಗೆ ರಕ್ತದ ಗಾಯಗಳಾಗಿವೆ. ಇದೇ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಹೆಚ್ಚು ಉದ್ರಿಕ್ತರಾಗಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ಸಾಧ್ಯತೆ ಇರುವುದರಿಂದ ಪೊಲೀಸ್ ಬಲ ಮತ್ತು ಭದ್ರತೆಯನ್ನು ಹೆಚ್ಚಿಸಲಾಗಿದೆ. ಪ್ರತಿಭಟನಾಕಾರರು ಇಲ್ಲಿಂದ ಕೇವಲ ಒಂದು ಕಿಮೀ ದೂರದಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ ಅವರಿಗೆ ಇಲ್ಲಿಗೆ ನುಗ್ಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ ಎಂದು ನಮ್ಮ ವರದಿಗಾರ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ವಿಕೋಪಕ್ಕೆ ತಿರುಗಿದ ಪಂಚಮಸಾಲಿ ಹೋರಾಟ: ಯತ್ನಾಳ್, ಸ್ವಾಮೀಜಿ ಸೇರಿದಂತೆ ಹಲವರು ಪೊಲೀಸ್ ವಶಕ್ಕೆ