AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾಳದ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಸುವೇಂದು ಅಧಿಕಾರಿ ರಾಜ್ಯಪಾಲ ಆರ್.ಎನ್.ರವಿ ಅವರನ್ನು ಭೇಟಿ ಮಾಡಿ ಹಕ್ಕು ಮಂಡಿಸಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್, ಹಲವಾರು ಕೇಂದ್ರ ಸಚಿವರು ಮತ್ತು ಎನ್‌ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಸುಷ್ಮಾ ಚಕ್ರೆ
|

Updated on: May 08, 2026 | 8:46 PM

Share

ಕೊಲ್ಕತ್ತಾ, ಮೇ 8: ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಕೆಲವೇ ಗಂಟೆಗಳ ಬಳಿಕ ಪಶ್ಚಿಮ ಬಂಗಾಳದ ನಿಯೋಜಿತ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ಇಂದು ಸಂಜೆ ಲೋಕ ಭವನದಲ್ಲಿ ರಾಜ್ಯಪಾಲ ಆರ್.ಎನ್.ರವಿ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಅಧಿಕಾರಾವಧಿಯನ್ನು ಔಪಚಾರಿಕವಾಗಿ ಕೊನೆಗೊಳಿಸಿದ ರಾಜ್ಯಪಾಲ ರವಿ ಗುರುವಾರ ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಿದ್ದರು. ಇದು ಈ ವರ್ಷದ ವಿಧಾನಸಭಾ ಚುನಾವಣೆಯಲ್ಲಿ 207 ಸ್ಥಾನಗಳನ್ನು ಗಳಿಸಿ ಬಹುಮತ ಪಡೆದಿದ್ದ ಬಿಜೆಪಿಗೆ ರಾಜ್ಯದಲ್ಲಿ ಮೊದಲ ಬಾರಿ ಸರ್ಕಾರ ರಚಿಸಲು ದಾರಿ ಮಾಡಿಕೊಟ್ಟಿತು. ಪಶ್ಚಿಮ ಬಂಗಾಳದಲ್ಲಿ ಹೊಸದಾಗಿ ಆಯ್ಕೆಯಾದ ಬಿಜೆಪಿ ಸರ್ಕಾರದ ಪ್ರಮಾಣವಚನ ಸಮಾರಂಭವು ನಾಳೆ (ಶನಿವಾರ) ಕೊಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್, ಹಲವಾರು ಕೇಂದ್ರ ಸಚಿವರು ಮತ್ತು ಎನ್‌ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ