Video: ಪಶ್ಚಿಮ ಬಂಗಾಳದ ವಿಪಕ್ಷ ನಾಯಕ ಸುವೇಂದು ಅಧಿಕಾರಿ ಬೆಂಗಾವಲು ವಾಹನದ ಮೇಲೆ ದಾಳಿ

Updated on: Aug 05, 2025 | 3:08 PM

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಧ್ವಂಸಗೊಳಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಿಜೆಪಿಯು ಟಿಎಂಸಿ ಕಾರ್ಯಕರ್ತರ ಮೇಲೆ ಆರೋಪ ಹೊರಿಸಿದೆ. ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವು ಆರೋಪಗಳನ್ನು ನಿರಾಕರಿಸಿತು ಮತ್ತು ಇದನ್ನು ಕೇಸರಿ ಪಕ್ಷ ರಚಿಸಿರುವ ನಾಟವಿದು ಎಂದು ಹೇಳಿದೆ.

ಕೂಚ್​ಬೆಹಾರ್, ಆಗಸ್ಟ್​ 05: ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಧ್ವಂಸಗೊಳಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಿಜೆಪಿಯು ಟಿಎಂಸಿ ಕಾರ್ಯಕರ್ತರ ಮೇಲೆ ಆರೋಪ ಹೊರಿಸಿದೆ. ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವು ಆರೋಪಗಳನ್ನು ನಿರಾಕರಿಸಿತು ಮತ್ತು ಇದನ್ನು ಕೇಸರಿ ಪಕ್ಷ ರಚಿಸಿರುವ ನಾಟವಿದು ಎಂದು ಹೇಳಿದೆ.

ಕೂಚ್‌ಬೆಹಾರ್ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ತೆರಳುತ್ತಿದ್ದಾಗ ಈ ಘರ್ಷಣೆ ಸಂಭವಿಸಿದೆ. ಮಧ್ಯಾಹ್ನ 12.35 ರ ಸುಮಾರಿಗೆ ಅಧಿಕಾರಿಯ ಬೆಂಗಾವಲು ಪಡೆ ಆ ಪ್ರದೇಶದ ಮೂಲಕ ಹಾದುಹೋಗುತ್ತಿದ್ದಾಗ, ತೃಣಮೂಲ ಪಕ್ಷದ ಬಾವುಟಗಳು ಮತ್ತು ಕಪ್ಪು ಬಾವುಟಗಳನ್ನು ಹಿಡಿದ ಗುಂಪೊಂದು ಖಗ್ರಾಬರಿ ಕ್ರಾಸಿಂಗ್‌ನಲ್ಲಿ ಹಲ್ಲೆ ನಡೆಸಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More