ಬೆಂಗಳೂರು: ಕೈಯಲ್ಲಿ ಪೊರಕೆ ಹಿಡಿದು ಕಸ ಗುಡಿಸಿದ ಶಾಸಕ ಬಿ.ವೈ ವಿಜಯೇಂದ್ರ
ಗಾಂಧಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಬಿಜೆಪಿ ಉಪಾಧ್ಯಕ್ಷ, ಶಾಸಕ ಬಿ.ವೈ ವಿಜಯೇಂದ್ರ ಭಾಗಿಯಾಗಿದ್ದಾರೆ. ಈ ವೇಳೆ ಬಿ.ವೈ ವಿಜಯೇಂದ್ರ ಅವರು ಪೊರಕೆ ಹಿಡಿದು ಕಸ ಗುಡಿಸಿದರು.
ಬೆಂಗಳೂರು, ಅ.01: ನಾಳೆ (ಅ.02) ಗಾಂಧಿ ಜಯಂತಿ ಹಿನ್ನೆಲೆ ಇಂದು ನಗರದಲ್ಲಿ ಸ್ವಚ್ಛ ಭಾರತ್ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಗಾಂಧಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಬಿಜೆಪಿ ಮುಖಂಡ ಸಪ್ತಗಿರಿಗೌಡ ನೇತೃತ್ವದಲ್ಲಿ ಅಭಿಯಾನ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಬಿಜೆಪಿ ಉಪಾಧ್ಯಕ್ಷ, ಶಾಸಕ ಬಿ.ವೈ ವಿಜಯೇಂದ್ರ ಭಾಗಿಯಾಗಿದ್ದಾರೆ. ಈ ವೇಳೆ ಬಿ.ವೈ ವಿಜಯೇಂದ್ರ ಅವರು ಪೊರಕೆ ಹಿಡಿದು ಕಸ ಗುಡಿಸಿದರು.
ಇನ್ನು ಇದೇ ವೇಳೆ ಬಿ.ವೈ ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಹಲವು ಜ್ವಲಂತ ಸಮಸ್ಯೆಗಳಿವೆ. ಸರ್ಕಾರ ಕಾವೇರಿ ವಿಚಾರದಲ್ಲಿ ಅನ್ಯಾಯ ಮಾಡ್ತಿದೆ. ಅಭಿವೃದ್ಧಿ ಮಾಡದೇ ನಿರ್ಲಕ್ಷ್ಯ ವಹಿಸಿದೆ. ಈ ಸರ್ಕಾರ ಶಾಸಕರಿಗೆ ಅನುದಾನ ಕೊಡ್ತಿಲ್ಲ. ಸರ್ಕಾರ ಯಾವ ದಿಕ್ಕಿನಲ್ಲಿ ಸಾಗ್ತಿದೆ ಅಂತ ಇದರಿಂದಲೇ ಗೊತ್ತಾಗುತ್ತೆ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Latest Videos