AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಮುಸೂಕ್ಷ್ಮ ಮಂಗಳೂರಿನಲ್ಲಿ ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ

ಕೋಮುಸೂಕ್ಷ್ಮ ಮಂಗಳೂರಿನಲ್ಲಿ ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ

ಅಶೋಕ್​ ಪೂಜಾರಿ, ಮಂಗಳೂರು
| Updated By: Ganapathi Sharma|

Updated on: Dec 15, 2025 | 2:18 PM

Share

ಕೋಮು ಸೂಕ್ಷ್ಮ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ತಲ್ವಾರ್ ಹಿಡಿದು ರೀಲ್ಸ್ ಮಾಡಿ ವಿಡಿಯೋ ಪೋಸ್ಟ್ ಮಾಡಿದ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ‘‘ಟೀಮ್​ ಎಸ್​​ಡಿಪಿಐ 2022’’ ಎಂಬ ಫೇಸ್​​ಬುಕ್ ಪೇಜ್​​ನಲ್ಲಿ ಹಿಂದೂಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿರುವ ವ್ಯಕ್ತಿಯನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು, ಡಿಸೆಂಬರ್ 15: ಸಾಮಾಜಿಕ ಜಾಲತಾಣಗಳಲ್ಲಿ ಭಯ ಹುಟ್ಟಿಸುವ ರೀತಿಯಲ್ಲಿ ತಲ್ವಾರ್ ಹಿಡಿದು ರೀಲ್ಸ್ ಮಾಡಿ ವಿಡಿಯೋ ಪೋಸ್ಟ್ ಮಾಡಿದ್ದ ಇಬ್ಬರು ಪುಂಡರನ್ನು ಮಂಗಳೂರು ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 13ರಂದು ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ವಿಡಿಯೋ ಹರಿದಾಡುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ‘Suresh Psy’ ಎಂಬ ಫೇಸ್‌ಬುಕ್ ಖಾತೆಯಿಂದ ಈ ವಿಡಿಯೋ ಶೇರ್ ಮಾಡಲಾಗಿದ್ದು, ತಲ್ವಾರ್ ಹಿಡಿದು ಡ್ಯಾನ್ಸ್ ರೀಲ್ಸ್ ಮಾಡಿದ್ದ ವ್ಯಕ್ತಿ ಅಮೀರ್ ಸುಹೇಲ್ ಎಂದು ಗುರುತಿಸಲಾಗಿದೆ. ಅಮೀರ್ ಸುಹೇಲ್ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರು ನಿವಾಸಿಯಾಗಿದ್ದಾನೆ. ಈ ವಿಡಿಯೋವನ್ನು ಕಾವೂರು ನಿವಾಸಿ ಸುರೇಶ್ ಎಂಬಾತ ತನ್ನ ಫೇಸ್‌ಬುಕ್ ಖಾತೆಯಲ್ಲಿ ಲೈಕ್ ಮತ್ತು ಹಾರ್ಟ್ ಚಿಹ್ನೆಗಳೊಂದಿಗೆ ಸ್ಟೋರಿ ರೂಪದಲ್ಲಿ ಪೋಸ್ಟ್ ಮಾಡಿದ್ದಾನೆ.

ಸಾರ್ವಜನಿಕರಲ್ಲಿ ಆತಂಕ ಮತ್ತು ಭಯದ ವಾತಾವರಣ ಸೃಷ್ಟಿಸಿದ ಆರೋಪದ ಹಿನ್ನೆಲೆಯಲ್ಲಿ ಕಾವೂರು ಠಾಣೆ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐಪಿಸಿ ಸೆಕ್ಷನ್ 352(2), ಬಿಎನ್ಎಸ್–2023ರ ಕಲಂ 4 ಮತ್ತು 25(1B), ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಹಾಗೂ ಐಟಿ ಕಾಯ್ದೆ ಕಲಂ 11ರ ಅಡಿ ಪ್ರಕರಣ ದಾಖಲಿಸಲಾಗಿದೆ.

ರೀಲ್ಸ್‌ಗೆ ಬಳಸಿದ್ದ ತಲ್ವಾರ್ ಮತ್ತು ವಿಡಿಯೋ ಪೋಸ್ಟ್ ಮಾಡಲು ಉಪಯೋಗಿಸಿದ್ದ ಮೊಬೈಲ್ ಫೋನ್‌ಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅಪಾಯಕಾರಿ ಹಾಗೂ ಭಯ ಹುಟ್ಟಿಸುವ ವಿಷಯಗಳನ್ನು ಪೋಸ್ಟ್ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ‘‘ಟೀಮ್​ ಎಸ್​​ಡಿಪಿಐ 2022’’ ಎಂಬ ಫೇಸ್​​ಬುಕ್ ಪೇಜ್​​ನಲ್ಲಿ ಹಿಂದೂಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಮಂಗಳೂರು ಮೂಲದ ವ್ಯಕ್ತಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಸೌದಿ ಅರೇಬಿಯಾದಿಂದ ಹಿಂದೂಗಳ ವಿರುದ್ಧ ಪೋಸ್ಟ್ ಮಾಡಿದ್ದ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ