Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್

Updated on: Apr 03, 2026 | 3:21 PM

ಭಾರತ ಸರ್ಕಾರವು ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಪಾಡ್‌ಕ್ಯಾಸ್ಟ್‌ನಲ್ಲಿ, ವಿಶ್ವಸಂಸ್ಥೆಯ ಮಾಜಿ ಭಾರತೀಯ ರಾಯಭಾರಿ ಸೈಯದ್ ಅಕ್ಬರುದ್ದೀನ್ ಈ ಆರೋಪಗಳನ್ನು ಆಧಾರರಹಿತ ಎಂದು ತಳ್ಳಿ ಹಾಕಿದ್ದಾರೆ. ಭಾರತವು ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಅವಿಧೇಯತೆ ತೋರಿದ ನಿದರ್ಶನಗಳ ದೀರ್ಘ ಪಟ್ಟಿಯೇ ಇದೆ ಎಂದು ಅವರು ಹೇಳಿದರು.

ನವದೆಹಲಿ, ಏಪ್ರಿಲ್ 03: ಭಾರತ ಸರ್ಕಾರವು ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಭಾರತವು ಅಮೆರಿಕದ ಆದೇಶ ಪಾಲಿಸುವ ದೇಶವಲ್ಲ ಎಂದಿರುವ ವಿಶ್ವಸಂಸ್ಥೆಯ ಮಾಜಿ ಭಾರತೀಯ ರಾಯಭಾರಿ ಸೈಯದ್ ಅಕ್ಬರುದ್ದೀನ್ ಈ ಆರೋಪಗಳನ್ನು ಆಧಾರರಹಿತ ಎಂದು ತಳ್ಳಿ ಹಾಕಿದ್ದಾರೆ. ಭಾರತವು ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಅವಿಧೇಯತೆ ತೋರಿದ ನಿದರ್ಶನಗಳ ದೀರ್ಘ ಪಟ್ಟಿಯೇ ಇದೆ ಎಂದು ಅವರು ಹೇಳಿದರು.

ಭಾರತ ಅಮೆರಿಕವನ್ನು ಅನುಸರಿಸುತ್ತಿದೆ ಎನ್ನುವ ಆರೋಪಗಳು ಕೂಡ ಆಧಾರ ರಹಿತ, ಡೊನಾಲ್ಡ್ ಟ್ರಂಪ್ ಶಾಂತಿ ಮಂಡಳಿಯನ್ನು ರಚಿಸಿದ್ದಾರೆ, ಪಾಕಿಸ್ತಾನ ಸೇರಿಕೊಂಡಿದೆ, ಭಾರತ ಸೇರಿಕೊಂಡಿಲ್ಲ ಯಾಕೆಂದರೆ ಅದು ನಿಜವಾದ ಅಂತಾರಾಷ್ಟ್ರೀಯ ಸಂಘಟನೆಯಲ್ಲ ಎಂದು ನಮಗೆ ತಿಳಿದಿದೆ ಎಂದರು.ಭಾರತದಲ್ಲಿನ ವಿರೋಧ ಪಕ್ಷವು ಆಗಾಗ ಸರ್ಕಾರವನ್ನು ಟೀಕಿಸಿದೆ ಮತ್ತು ಅದು ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಆರೋಪಿಸಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ಹಲವಾರು ಸಂದರ್ಭಗಳಲ್ಲಿ ಇದೇ ರೀತಿಯ ಹೇಳಿಕೆಗಳನ್ನು ನೀಡಿದ್ದರು.ಭಾರತವು ತಮ್ಮ ಮೂಲಕ ಇರಾನ್ ಜೊತೆ ಮಾತುಕತೆ ನಡೆಸಬೇಕೆಂದು ಅಮೆರಿಕ ಬಯಸಿತ್ತು, ನಾವು ಮಾಡಲಿಲ್ಲ, ಉಕ್ರೇನ್ ಸಮಯದಲ್ಲಿ ಭಾರತವು ಅಮೆರಿಕದ ಪರವಾಗಿ ಮತ ಚಲಾಯಿಸಬೇಕೆಂದು ಅಮೆರಿಕ ಬಯಸಿತ್ತು . ನಾವು ಮಾಡಲಿಲ್ಲ. ಭಾರತವು ಅಮೆರಿಕದ ಆದೇಶಗಳನ್ನು ಪಾಲಿಸುವ ದೇಶವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More